Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಸಣ್ಣ ಪುಟ್ಟ ಅಂಗಡಿಗಳಿಗೂ ಅವಕಾಶ ನೀಡಲು ಆಗ್ರಹ

ಸಣ್ಣ ಪುಟ್ಟ ಅಂಗಡಿಗಳಿಗೂ ಅವಕಾಶ ನೀಡಲು ಆಗ್ರಹ

ಉಡುಪಿ: ಜಿಲ್ಲೆಯಲ್ಲಿ ದಿನ ಬಿಟ್ಟು ದಿನವಾದರೂ ಸಣ್ಣ ಪುಟ್ಟ ಅಂಗಡಿಗಳಿಗೆ ವ್ಯಾಪಾರ ನಡೆಸಲು ಅವಕಾಶ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕ್ರಮ ಶ್ಲಾಘನೀಯವಾದರೂ ಕಳೆದ 50 ದಿನದಿಂದ ಕೋವಿಡ್ ನಿಯಂತ್ರಣಕ್ಕಾಗಿ ಜಾರಿಯಾದ ನಿರ್ಬಂಧಗಳಿಂದ ವ್ಯಾಪಾರ ವಹಿವಾಟು ಸ್ಥಗಿತಗೊಂಡಿದ್ದು, ಜನತೆ ಸಂಕಷ್ಟಕ್ಕೆ ಸಿಲುಕಿ ಜೀವನ ನಡೆಸುವುದು ಕಷ್ಟವಾಗಿದೆ. ಬಟ್ಟೆ ಮಳಿಗೆ ಹಾಗೂ ಇನ್ನಿತರ ಅಂಗಡಿಗಳಲ್ಲಿ ಕೆಲಸ ಮಾಡುವ ನೌಕರರಿಗೆ ಕೆಲಸವಿಲ್ಲದೆ ದಿನನಿತ್ಯದ ಅಗತ್ಯತೆ ಪೂರೈಸುವುದು ಕಷ್ಟಕರವಾಗಿದೆ.

ಸಾಮಾನ್ಯ ಜನರನ್ನೂ ಗಮನದಲ್ಲಿಟ್ಟುಕೊಂಡು ಈಗಾಗಲೇ ಕೆಲವು ವ್ಯಾಪಾರಗಳಿಗೆ ವಿನಾಯಿತಿ ನೀಡಲಾಗಿದ್ದು ಇನ್ನುಳಿದ ಸಣ್ಣಪುಟ್ಟ ಅಂಗಡಿ ಮಾಲಿಕರು ವ್ಯಾಪಾರ ಸ್ಥಗಿತಗೊಂಡು ಯಾವ ರೀತಿ ಜೀವನ ನಿರ್ವಹಣೆ ಮಾಡಬೇಕೆಂದು ತೋಚದ ಸ್ಥಿತಿಯಲ್ಲಿದ್ದಾರೆ. ಅವರು ನೆಮ್ಮದಿಯಿಂದ ಜೀವನ ನಡೆಸುವಂತಾಗುವ ನಿಟ್ಟಿನಲ್ಲಿ ಆಯ್ದ ಇತರ ಅಗತ್ಯ ವಸ್ತುಗಳ ಅಂಗಡಿಗಳಿಗೆ ಪರ್ಯಾಯ ದಿನಗಳಲ್ಲಿ ತೆರೆಯಲು ಅನುಮತಿ ನೀಡಿ ದಿನನಿತ್ಯದ ವ್ಯಾಪಾರವನ್ನೇ ಅವಲಂಬಿಸಿರುವ ಕುಟುಂಬಗಳಿಗೆ ಅನುಕೂಲವಾಗುವಂತೆ ವಿನಾಯಿತಿ ನೀಡಬೇಕು ಎಂದು ಅಶೋಕ್ ಕುಮಾರ್ ಕೊಡವೂರು ಆಗ್ರಹಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!