Sunday, July 3, 2022
Home ಸಮಾಚಾರ ಜಿಲ್ಲಾ ಸುದ್ದಿ ಕಾನೂನು ಪಾಲಿಸದಿದ್ದಲ್ಲಿ ಕಠಿಣ ಕ್ರಮ

ಕಾನೂನು ಪಾಲಿಸದಿದ್ದಲ್ಲಿ ಕಠಿಣ ಕ್ರಮ

ಉಡುಪಿ: ಜಿಲ್ಲೆಯಲ್ಲಿ ಸರಕಾರ ಅನ್ ಲಾಕ್ ಮಾಡಿದ್ದು, ಕೋವಿಡ್ ನಿಯಮ ಪಾಲಿಸದ ಜನಪ್ರತಿನಿಧಿಗಳು, ಹೊಟೇಲ್, ಅಂಗಡಿ ಮಾಲೀಕರು ಮತ್ತು ಸಾರ್ವಜನಿಕರ ವಿರುದ್ಧ ಜಿಲ್ಲಾಧಿಕಾರಿ ಗರಂ ಆಗಿದ್ದಾರೆ. ಕಾನೂನು ಪಾಲಿಸದ ಯಾರೇ ಆಗಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯಲ್ಲಿ ನಿರ್ಬಂಧ ಸಡಿಲಿಸಿರುವುದು ಸರಕಾರವೇ ಹೊರತು ಕೊರೊನಾ ಅಲ್ಲ. ಸರಕಾರದ ಆದೇಶ ಪಾಲಿಸಿವುದು ಪ್ರತಿಯೊಬ್ಬರ ಜವಾಬ್ದಾರಿ. ಕೆಲವರು ನಿರ್ಬಂಧ ಸಡಿಲಿಕೆಯನ್ನು ದುರ್ಬಳಕೆ ಮಾಡುತ್ತಿದ್ದಾರೆ.

ಯಾವುದೇ ಕಾರ್ಯಕ್ರಮ ಆಯೋಜಿಸಕೂಡದು ಎಂಬ ಸರಕಾರದ ಸೂಚನೆ ಇದ್ದರೂ ಕಾರ್ಯಕ್ರಮಗಳು ನಡೆಯುತ್ತಲೇ ಇವೆ ಎಂದು ಖೇದ ವ್ಯಕ್ತಪಡಿಸಿದರು.

ಸಂಘಸಂಸ್ಥೆಗಳು, ರಾಜಕೀಯ ಪಕ್ಷಗಳು ಕಾರ್ಯಕ್ರಮ, ಪ್ರತಿಭಟನೆ ಮಾಡುತ್ತಲೇ ಇವೆ. ನಿಮಗೆಲ್ಲಾ ಕಾರ್ಯಕ್ರಮ ಮಾಡಲು ಅನುಮತಿ ಕೊಟ್ಟವರು ಯಾರು ಎಂದು ಪ್ರಶ್ನಿಸಿರುವ ಡಿಸಿ, ಜಿಲ್ಲಾಡಳಿತಕ್ಕೇ ಅನುಮತಿ ನೀಡಲು ಅವಕಾಶ ಇಲ್ಲ ಎಂದ ಮೇಲೆ ನಿಮಗೆ ಅನುಮತಿ ಕೊಟ್ಟದ್ದು ಯಾರು? ಎಂದು ಪ್ರಶ್ನಿಸಿದ್ದಾರೆ.

ಮದುವೆಗಳಲ್ಲಿ 40ಕ್ಕಿಂತ ಹೆಚ್ಚು ಜನ ಭಾಗವಹಿಸುತ್ತಿದ್ದಾರೆ. ಬಸ್ಸಿನಲ್ಲಿ ಶೇ. 50ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದಾರೆ. ಹೊಟೇಲ್ ಗಳಲ್ಲಿ ಸಂಜೆ 6ರ ಬಳಿಕವೂ ಗ್ರಾಹಕರಿರುವುದು ಗಮನಕ್ಕೆ ಬಂದಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ ತಿಳಿಸಿದ್ದಾರೆ.

ಕಾರ್ಯಕ್ರಮ ಆಯೋಜಕರು ಸಾರ್ವಜನಿಕರ ಜೀವನದ ಜೊತೆ ಆಟವಾಡುತ್ತಿದ್ದಾರೆ. ಸಣ್ಣವರಿಗೆ, ದೊಡ್ಡವರಿಗೆ ಎಲ್ಲರಿಗೂ ಕಾನೂನು ಒಂದೇ. ಜನಪ್ರತಿನಿಧಿಗಳು ಕಾನೂನು ಪಾಲನೆ ಮಾಡಿದರೆ ಅವರ ಕಾರ್ಯಕರ್ತರೂ ಪಾಲನೆ ಮಾಡುತ್ತಾರೆ. ಅನುಮತಿ ಇಲ್ಲದೆ ಕಾರ್ಯಕ್ರಮ ಮಾಡಿದರೆ ಎಷ್ಟೇ ದೊಡ್ಡವರಾದರೂ ಬಿಡುವುದಿಲ್ಲ.

ಯಾರೂ ಯಾವುದೇ ಕಾರ್ಯಕ್ರಮ ಮಾಡುವಂತಿಲ್ಲ. ಈ ಮನವಿಗೆ ಬೆಲೆ ಕೊಡದಿದ್ದಲ್ಲಿ ಎಪಿಡಮಿಕ್ ಆಕ್ಟ್ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿ ಜಗದೀಶ್ ಎಚ್ಚರಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!