Wednesday, July 6, 2022
Home ಸಮಾಚಾರ ಜಿಲ್ಲಾ ಸುದ್ದಿ ಜಿಲ್ಲೆಯಾದ್ಯಂತ ವರ್ಷಧಾರೆ

ಜಿಲ್ಲೆಯಾದ್ಯಂತ ವರ್ಷಧಾರೆ

ಸುದ್ದಿಕಿರಣ ವರದಿ
ಸೋಮವಾರ, ಮೇ 16

ಜಿಲ್ಲೆಯಾದ್ಯಂತ ವರ್ಷಧಾರೆ
ಉಡುಪಿ: ವಾಯುಭಾರ ಕುಸಿತದ ಪರಿಣಾಮ ಸೋಮವಾರ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ. ಬೆಳಗ್ಗಿನಿಂದಲೇ ಒಂದೇ ಸಮನೆ ಮಳೆಯಾಗಿದ್ದು, ಮಳೆಯೊಂದಿಗೆ ಗುಡುಗು ಸಿಡಿಲು ಕೂಡಾ ಇತ್ತು.

ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ಹಾಗೂ ಬೆಂಗಳೂರಿನ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿದೆ.

ಜಿಲ್ಲೆಯಲ್ಲಿ ಮೇ 17 ಮತ್ತು 19ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮೇ 18ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.

ಆ ದಿನಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ನದಿ, ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವಂತೆ ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!