Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಮಲ್ಪೆ ಮೀನುಗಾರಿಕೆ ಜೆಟ್ಟಿ ನಿರ್ಮಾಣ: ಸ್ಥಳ ಪರಿಶೀಲನೆ

ಮಲ್ಪೆ ಮೀನುಗಾರಿಕೆ ಜೆಟ್ಟಿ ನಿರ್ಮಾಣ: ಸ್ಥಳ ಪರಿಶೀಲನೆ

ಉಡುಪಿ: ಮಲ್ಪೆ ಮೀನುಗಾರಿಕೆ ಜೆಟ್ಟಿ ನಿರ್ಮಾಣ ಕಾಮಗಾರಿಕೆ 9.6 ಕೋ. ರೂ. ಮಂಜೂರಾಗಿದ್ದು, ತ್ವರಿತವಾಗಿ ಕಾಮಗಾರಿ ಆರಂಭಿಸುವ ನಿಟ್ಟಿನಲ್ಲಿ ಶಾಸಕ ಕೆ. ರಘುಪತಿ ಭಟ್ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

ಸ್ಥಳೀಯ ನಗರಸಭಾ ಸದಸ್ಯ ಎಡ್ಲಿನ್ ಕರ್ಕಡ, ನಗರಸಭೆ ನಾಮ ನಿರ್ದೇಶಿತ ಸದಸ್ಯ ವಿಜಯ ಕುಂದರ್, ಮಲ್ಪೆ ಮೀನುಗಾರರ ಸಂಘ ಅಧ್ಯಕ್ಷ ಕೃಷ್ಣ ಸುವರ್ಣ, ಉಪಾಧ್ಯಕ್ಷರಾದ ರಮೇಶ್ ಕೋಟ್ಯಾನ್, ನಾಗರಾಜ್ ಕುಂದರ್ ಮತ್ತು ವಿಠ್ಠಲ ಕರ್ಕೇರ, ಪ್ರಧಾನ ಕಾರ್ಯದರ್ಶಿ ಸುಭಾಷ್ ಮೆಂಡನ್, ಕೋಶಾಧಿಕಾರಿ ಶಿವಾನಂದ ಹಾಗೂ ವಿವಿಧ ಸಂಘಸಂಸ್ಥೆ ಪದಾಧಿಕಾರಿಗಳು, ಬಂದರು ಮತ್ತು ಮೀನುಗಾರಿಕೆ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ಉದಯಕುಮಾರ್, ಸಹಾಯಕ ಅಭಿಯಂತರ ಜಯರಾಜ್, ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಶಿವಕುಮಾರ್, ಮೀನುಗಾರಿಕೆ ಮತ್ತು ಬಂದರು ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಸುಷ್ಮಾ ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!