Monday, July 4, 2022
Home ಸಮಾಚಾರ ಡಿಕೆಶಿ ಕೊಲ್ಲೂರು ಭೇಟಿ

ಡಿಕೆಶಿ ಕೊಲ್ಲೂರು ಭೇಟಿ

ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾದ ಬಳಿಕ ಡಿ. ಕೆ. ಶಿವಕುಮಾರ್ ಮೊತ್ತ ಮೊದಲ ಬಾರಿಗೆ ಭಾನುವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದರು.
ಮೂಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ದೇವಿಗೆ ಪ್ರಾರ್ಥನೆ ಸಲ್ಲಿಸಿದರು.
ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಮೇಶ್ ಗಾಣಿಗ ಕೊಲ್ಲೂರು ಹಾಗೂ ಯುವ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಅದ್ದೂರಿ ಸ್ವಾಗತ ಕೋರಿದರು.
ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಹಿಳಾ ಕಾಂಗ್ರೆಸ್ ರಾಜ್ಯ ಅಧ್ಯಕ್ಷೆ ಡಾ. ಪುಷ್ಪ ಅಮರನಾಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್. ರಾಜು ಪೂಜಾರಿ, ಮಾಜಿ ಶಾಸಕ ಯು. ಆರ್. ಸಭಾಪತಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ. ರಮೇಶ್ ಗಾಣಿಗ ಕೊಲ್ಲೂರು, ತಾಲೂಕು ಪಂಚಾಯತ್ ಸದಸ್ಯೆ ಗ್ರೀಷ್ಮಾ ಗಿರಿಧರ್ ಭಿಡೆ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ವಿ. ಅಮೀನ್, ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಬೈಂದೂರು ಯೂತ್ ಕಾಂಗ್ರೆಸ್ ಅಧ್ಯಕ್ಷ ಶೇಖರ್ ಪೂಜಾರಿ ಉಪ್ಪುಂದ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸನತ್ ಬಳೆಗಾರ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.
ದೇವಳದ ಅರ್ಚಕ ನರಸಿಂಹ ಅಡಿಗ ವಿಶೇಷ ಪೂಜೆ ಸಲ್ಲಿಸಿದರು. ದೇವಳದ ವತಿಯಿಂದ ಡಿ. ಕೆ. ಶಿವಕುಮಾರ್ ಅವರಿಗೆ ಪ್ರಸಾದ ನೀಡಿ, ಶಾಲು ಹೊದಿಸಿ ಗೌರವಿಸಲಾಯಿತು.
ಬಳಿಕ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೂ ಭೇಟಿ ನೀಡಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!