Tuesday, May 17, 2022
Home ಸಮಾಚಾರ ಅಪರಾಧ ತಾಯಿ ಮಗು ಶವ ಪತ್ತೆ

ತಾಯಿ ಮಗು ಶವ ಪತ್ತೆ

ಸುದ್ದಿಕಿರಣ ವರದಿ
ಸೋಮವಾರ, ಮೇ 9

ತಾಯಿ ಮಗು ಶವ ಪತ್ತೆ
ಮಣಿಪಾಲ: ಇಲ್ಲಿಗೆ ಸಮೀಪದ ಆತ್ರಾಡಿ ಗ್ರಾ.ಪಂ. ವ್ಯಾಪ್ತಿಯ ಮದಗದಲ್ಲಿ ತಾಯಿ ಮತ್ತು 10 ವರ್ಷದ ಮಗುವಿನ ಮೃತದೇಹ ಸೋಮವಾರ ಪತ್ತೆಯಾಗಿದೆ.

ಚೆಲುವಿ (28) ಹಾಗೂ ಪ್ರಿಯಾ (10) ಮೃತದೇಹ ಮನೆಯ ಕೋಣೆಯಲ್ಲಿ ಪತ್ತೆಯಾಗಿದ್ದು, ಬಾಯಿಯಲ್ಲಿ ರಕ್ತದ ಕಲೆಗಳು ಕಂಡುಬಂದಿದೆ ಎನ್ನಲಾಗಿದೆ.

ಮಣಿಪಾಲದ ಖಾಸಗಿ ಸಂಸ್ಥೆಯಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡಿಕೊಂಡಿದ್ದ ಚೆಲುವಿ, ತನ್ನಿಬ್ಬರು ಮಕ್ಕಳೊಂದಿಗೆ ತಾಯಿ ಮನೆಯಲ್ಲಿ ವಾಸವಿದ್ದರು.

ಭಾನುವಾರ ಚೆಲುವಿ ಅವರ ತಾಯಿ ಮತ್ತು ಮಗ ಊರಿಗೆ ಹೋಗಿದ್ದಾರೆ. ಮನೆಯಲ್ಲಿ ಚೆಲುವಿ ಮತ್ತು ಮಗಳು ಮಾತ್ರ ಇದ್ದರು.

ಬೆಳಿಗ್ಗೆ ನೆರೆ ಮನೆಯವರಿಗೆ ಕರೆ ಮಾಡಿದಾಗ ಚೆಲುವಿಯ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಚೆಲುವಿ ತಾಯಿ ಮಾಹಿತಿ ನೀಡಿದ್ದು, ಸ್ಥಳೀಯರು ಮನೆಗೆ ತೆರಳಿ ನೋಡಿದಾಗ ಬಾಗಿಲು ಅರ್ಧ ತೆರೆದಿದ್ದು, ಒಳ ಹೋಗಿ ನೋಡಿದಾಗ ಮೃತ ದೇಹ ಪತ್ತೆಯಾಗಿದೆ.

ಸ್ಥಳದಲ್ಲಿ ಹೆಚ್ಚವರಿ ಎಸ್ಪಿ ಸಿದ್ದಲಿಂಗಪ್ಪ, ಡಿವೈಎಸ್ಪಿ ಸುಧಾಕರ ನಾಯ್ಕ್, ಬ್ರಹ್ಮಾವರ ವೃತ್ತನಿರೀಕ್ಷಕ ಅನಂತಪದ್ಮನಾಭ ಸೇರಿದಂತೆ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದರು.

ಸ್ಥಳಕ್ಕೆ ಶ್ವಾನ ದಳ, ಬೆರಳಚ್ಚು ತಜ್ಞರು, ಎಫ್.ಎಸ್.ಎಲ್ ತಂಡ ಆಗಮಿಸಿ ಮಾಹಿತಿ ಕಲೆಹಾಕಿದೆ.

ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!