Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ತುರ್ತು ಪರಿಸ್ಥಿತಿ ಕರಾಳ ದಿನಾಚರಣೆ: ಸೋಮಶೇಖರ್ ಭಟ್ ಗೆ ಗೌರವಾರ್ಪಣೆ

ತುರ್ತು ಪರಿಸ್ಥಿತಿ ಕರಾಳ ದಿನಾಚರಣೆ: ಸೋಮಶೇಖರ್ ಭಟ್ ಗೆ ಗೌರವಾರ್ಪಣೆ

ಉಡುಪಿ: ಬಿಜೆಪಿ ಉಡುಪಿ ನಗರ ಆಶ್ರಯದಲ್ಲಿ ಶುಕ್ರವಾರ ಆಚರಿಸಲಾದ ತುರ್ತು ಪರಿಸ್ಥಿತಿ ಕರಾಳ ದಿನಾಚರಣೆ ಪ್ರಯುಕ್ತ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸೆರೆವಾಸ ಅನುಭವಿಸಿದ್ದ ಉಡುಪಿ ನಗರ ಭಾಗದ ಹಿರಿಯರಿಗೆ ಗೌರವಾರ್ಪಣೆ ಹಮ್ಮಿಕೊಳ್ಳಲಾಗಿದ್ದು, ಪಕ್ಷದ ಹಿರಿಯರು ಹಾಗೂ ನಗರಸಭೆ ಮಾಜಿ ಅಧ್ಯಕ್ಷ ಎಂ. ಸೋಮಶೇಖರ ಭಟ್ ಅವರಿಗೆ ಅವರ ನಿವಾಸಕ್ಕೇ ತೆರಳಿ ಶಾಸಕ ಕೆ. ರಘುಪತಿ ಭಟ್ ಗೌರವಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ನಗರಸಭೆಯ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಸಭಾ ಸದಸ್ಯೆ ರಶ್ಮಿ ಚಿತ್ತರಂಜನ್ ಭಟ್, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ ಮಣಿಪಾಲ್ ಮತ್ತು ದಿನೇಶ್ ಅಮೀನ್ ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!