Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ತುರ್ತು ಪರಿಹಾರಕ್ಕೆ ಆಗ್ರಹ

ತುರ್ತು ಪರಿಹಾರಕ್ಕೆ ಆಗ್ರಹ

ಉಡುಪಿ: ತೌಕ್ತೆ ಚಂಡಮಾರುತದಿಂದ ಉಡುಪಿಯ ಕರಾವಳಿ ಭಾಗದಲ್ಲಿ ಜನ, ಜಾನುವಾರು ಮತ್ತು ಕೃಷಿಗೆ ಅಪಾರ ಹಾನಿಯುಂಟಾಗಿದ್ದು ಜಿಲ್ಲಾಡಳಿತ ಜನತೆಯ ಸಂಕಷ್ಟಕ್ಕೆ ಸ್ಪಂದಿಸಿ ತುರ್ತು ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಈಗಾಗಲೇ ತುರ್ತು ಕಾರ್ಯಪಡೆ ರಚಿಸಿದ್ದು, ಅದು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ. ಸಂಕಷ್ಟಕ್ಕೊಳಗಾದವರ ಸ್ಥಳಾಂತರ, ತಾತ್ಕಾಲಿಕ ವಸತಿ ಕಲ್ಪಿಸುವುದು ಮೊದಲಾದ ರಕ್ಷಣಾತ್ಮಕ ಪರಿಹಾರ ಕ್ರಮ ಕೈಗೊಳ್ಳಲು ಜಿಲ್ಲಾಡಳಿತದೊಂದಿಗೆ ಸಹಕರಿಸಲಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪ್ರಶಾಂತ್ ಜತ್ತನ್ನ, ಕಾನೂನು ಘಟಕಾಧ್ಯಕ್ಷ ಹರೀಶ್ ಶೆಟ್ಟಿ ಪಾಂಗಾಳ, ಸೇವಾದಳ ಅಧ್ಯಕ್ಷ ಕಿಶೋರ್ ಕುಮಾರ್ ಎರ್ಮಾಳ್, ದೀಪಕ್, ಮಧುಕರ್, ಮೋಹನ ಸುವರ್ಣ, ಪಂಚಾಯತ್ ಸದಸ್ಯೆ ಅರುಣಕುಮಾರಿ ಮೊದಲಾದವರಿದ್ದರು.

ಚಂಡಮಾರುತದಿಂದ ಹಾನಿಗೊಳಗಾದ ಪಡುಬಿದ್ರಿ, ಎರ್ಮಾಳು, ಕಾಪು, ಪಡುಕೆರೆ, ಮಲ್ಪೆ ಪ್ರದೇಶಗಳಿಗೆ ಭೇಟಿ ನೀಡಲಾಯಿತು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!