Tuesday, May 17, 2022
Home ಸಮಾಚಾರ ಜಿಲ್ಲಾ ಸುದ್ದಿ ತೆಂಕನಿಡಿಯೂರು: ಸಾಮೂಹಿಕ ಕನ್ನಡ ಗೀತೆ ಗಾಯನ

ತೆಂಕನಿಡಿಯೂರು: ಸಾಮೂಹಿಕ ಕನ್ನಡ ಗೀತೆ ಗಾಯನ

ತೆಂಕನಿಡಿಯೂರು: ಸಾಮೂಹಿಕ ಕನ್ನಡ ಗೀತೆ ಗಾಯನ
(ಸುದ್ದಿಕಿರಣ ವರದಿ)

ಉಡುಪಿ: 66ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ಸರಕಾರದ ಆಶಯದಂತೆ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ತೆಂಕನಿಡಿಯೂರು ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಮಾತಾಡು ಮಾತಾಡು ಕನ್ನಡ ಕಾರ್ಯಕ್ರಮ ಅಂಗವಾಗಿ ಗುರುವಾರ ಸಾಮೂಹಿಕ ಗೀತ ಗಾಯನ ನಡೆಯಿತು

ಪಂಚದಿನಗಳ ಕಾರ್ಯಕ್ರಮ
ರಾಜ್ಯೋತ್ಸವ ಅಂಗವಾಗಿ ಕಾಲೇಜಿನಲ್ಲಿ ಏರ್ಪಡಿಸಿರುವ ಐದು ದಿನಗಳ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಉದ್ಘಾಟಿಸಿದರು.

ಕಾಲೇಜಿನ ಪ್ರಾಂಶುಪಾಲ ಡಾ| ಗಣನಾಥ ಎಕ್ಕಾರು ಕಾರ್ಯಕ್ರಮದ ಆಶಯ ವಿವರಿಸಿದರು. ಐ.ಕ್ಯೂ.ಎ.ಸಿ. ಸಂಚಾಲಕ ಡಾ| ಸುರೇಶ್ ರೈ ಕೆ., ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಕರಬ ಇದ್ದರು.

ಸಾಂಸ್ಕೃತಿಕ ಸಂಘದ ಸಂಚಾಲಕಿ ರತ್ನಮಾಲಾ ವಂದಿಸಿದರು. ಶರ್ಮಿಳಾ ಹಾರಾಡಿ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಅಧ್ಯಾಪಕರು, ಬೋಧಕೇತರ ಸಿಬ್ಬಂದಿಗಳೊಂದಿಗೆ ಪಂಚಾಯತ್ ಸದಸ್ಯರು ಮುನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದ ಅಂಗವಾಗಿ ಕನ್ನಡ ಮಾತನಾಡು ಸ್ಪರ್ಧೆ, ರಸಪ್ರಶ್ನೆ, ಗಾಯನ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ನ. 1ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ವಿದ್ವಾಂಸ ಸುಜಯೇಂದ್ರ ಹಂದೆ ಉಪನ್ಯಾಸ ನೀಡುವರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!