Sunday, July 3, 2022
Home ಸಮಾಚಾರ ಜಿಲ್ಲಾ ಸುದ್ದಿ ಶ್ಯಾಮಪ್ರಸಾದ್ ಮುಖರ್ಜಿ ತ್ಯಾಗ, ಬಲಿದಾನ ಕಾರ್ಯಕರ್ತರಿಗೆ ದಾರಿದೀಪ

ಶ್ಯಾಮಪ್ರಸಾದ್ ಮುಖರ್ಜಿ ತ್ಯಾಗ, ಬಲಿದಾನ ಕಾರ್ಯಕರ್ತರಿಗೆ ದಾರಿದೀಪ

ಉಡುಪಿ: ಅಖಂಡ ಭಾರತದ ಪರಿಕಲ್ಪನೆಗೆ ಬೀಜ ಬಿತ್ತಿದ ಡಾ| ಶ್ಯಾಮಪ್ರಸಾದ್ ಮುಖರ್ಜಿ ದೂರದರ್ಶಿ ಚಿಂತನೆ, ತತ್ವಾದರ್ಶ, ತ್ಯಾಗ, ಬಲಿದಾನ ಕಾರ್ಯಕರ್ತರಿಗೆ ದಾರಿದೀಪ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಜನಸಂಘ ಸಂಸ್ಥಾಪಕ ಡಾ| ಶ್ಯಾಮಪ್ರಸಾದ್ ಮುಖರ್ಜಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಡಾ| ಮುಖರ್ಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು.

ಒಂದು ದೇಶದಲ್ಲಿ ಎರಡು ಸಂವಿಧಾನ, ಎರಡು ರಾಷ್ಟ್ರ ಧ್ವಜ, ಎರಡು ಪ್ರಧಾನಿ ಸಲ್ಲದು ಎಂಬ ನೀತಿಯನ್ನು ಪ್ರತಿಪಾದಿಸಿದ್ದ ಡಾ| ಮುಖರ್ಜಿ, ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿರಬೇಕು ಎಂಬ ಚಿಂತನೆಯೊಂದಿಗೆ ನೆಹರೂ ಸಂಪುಟದ ತನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶದ ಏಕತೆ ಮತ್ತು ಅಖಂಡತೆಗಾಗಿ ಹೋರಾಡಿದ ಅಪ್ಪಟ ದೇಶಪ್ರೇಮಿ.

ಅಧಿಕಾರ ಶಾಶ್ವತವಲ್ಲ, ಅಧಿಕಾರಕ್ಕಾಗಿ ದೇಶದ ಏಕತೆಯನ್ನು ಬಲಿ ಕೊಡುವುದಿಲ್ಲ ಎಂಬ ವಿಚಾರಧಾರೆ ಮುಂದಿಟ್ಟುಕೊಂಡು ಹೋರಾಟ ನಡೆಸಿದ್ದರು. ಅದರಿಂದಲೇ ಅವರ ಬಲಿದಾನವಾಯಿತು ಎಂದು ಕುಯಿಲಾಡಿ ಬಣ್ಣಿಸಿದರು.

ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರಬಾಬು, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಉಪಾಧ್ಯಕ್ಷರಾದ ಪೆರ್ಣಂಕಿಲ ಶ್ರೀಶ ನಾಯಕ್ ಮತ್ತು ನಯನಾ ಗಣೇಶ್, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಬಿಜೆಪಿ ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ ಮತ್ತು ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ ಉಪ್ಪುಂದ, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಬಾಣ, ಜಿಲ್ಲಾ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಸದಾನಂದ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆಲ್ವಿನ್ ಡಿ’ಸೋಜ, ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕ ಚಂದ್ರಶೇಖರ ಪ್ರಭು, ಉಡುಪಿ ನಗರ ಪ್ರಶಿಕ್ಷಣ ಸಂಚಾಲಕ ಲೋಕಯ್ಯ, ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಪೂರ್ಣಿಮಾ ರತ್ನಾಕರ್ ಶೆಟ್ಟಿ, ಮಾಯಾ ಕಾಮತ್, ಲೈಲಾ ಪ್ರಭಾವತಿ, ದಯಾಶಿನಿ ಪಾಂಡುರಂಗ ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!