ದಿವ್ಯಾಂಗರಿಗೆ ಮೀಸಲಿಟ್ಟ ಅನುದಾನದ ಸದ್ಬಳಕೆ: ಶಾಸಕ ಭಟ್ ಆಶಯ
(ಸುದ್ದಿಕಿರಣ ವರದಿ)
ಉಡುಪಿ: ಎಲ್ಲಾ ಇಲಾಖೆಗಳಲ್ಲಿ ವಿಕಲಚೇತನರಿಗೆ ಮೀಸಲಿಟ್ಟ ಅನುದಾನದ ಸದ್ಭಳಕೆ ಆಗಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದರು.
ಸೋಮವಾರ ಇಲ್ಲಿನ ಮಿಷನ್ ಕಂಪೌಂಡ್ ನ ಆಶಾ ನಿಲಯ ವಿಶೇಷ ಶಾಲೆಯಲ್ಲಿ ದಿವ್ಯಾಂಗರಿಗೆ ತ್ರಿಚಕ್ರ ವಾಹನ, ಟಾಕಿಂಗ್ ಲ್ಯಾಪ್ ಟಾಪ್, ಹೊಲಿಗೆ ಯಂತ್ರ ಹಾಗೂ ಬ್ರೈಲ್ ಕಿಟ್ ವಿತರಿಸಿ ಮಾತನಾಡಿದರು.
ದಿವ್ಯಾಂಗರಿಗೆ ಸಹಾನುಭೂತಿ ತೋರುವ ಬದಲು ಅವರಿಗೆ ಸಹಾಯ ಹಸ್ತ ನೀಡುವ ಮೂಲಕ ಅವರು ಸಮಾಜದ ಮುಖ್ಯವಾಹಿನಿಯಲ್ಲಿ ಕಾಣಿಸಿಕೊಂಡು, ಉತ್ತಮ ಸಾಧನೆ ನೀಡಲು ಪ್ರೇರೇಪಿಸಬೇಕು ಎಂದರು.
ಈ ಸಂದರ್ಭದಲ್ಲಿ ಶ್ರವಣದೋಷವುಳ್ಳ 6 ಮಂದಿಗೆ ಹೊಲಿಗೆ ಯಂತ್ರ, 5 ಮಂದಿ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್, 7 ಮಂದಿ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್, 35 ಮಂದಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ ವಿತರಿಸಲಾಯಿತು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕಿರಣ್ ಫಡ್ನೇಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶ ಶೇಷಪ್ಪ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ರತ್ನಾ, ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಸಭಾಪತಿ ಅಧ್ಯಕ್ಷ ಡಾ| ತಲ್ಲೂರು ಶಿವರಾಮ ಶೆಟ್ಟಿ, ಗೌರವ ಕಾರ್ಯದರ್ಶಿ ಜಯರಾಮ ಆಚಾರ್ಯ ಸಾಲಿಗ್ರಾಮ ಮೊದಲಾದವರಿದ್ದರು