Wednesday, July 6, 2022
Home ಸಮಾಚಾರ ಜಿಲ್ಲಾ ಸುದ್ದಿ ಸಂಪುಟ ವಿಸ್ತರಣೆ ಕುರಿತು ದೆಹಲಿಯಲ್ಲಿ ವಿಶೇಷ ಸಭೆ

ಸಂಪುಟ ವಿಸ್ತರಣೆ ಕುರಿತು ದೆಹಲಿಯಲ್ಲಿ ವಿಶೇಷ ಸಭೆ

ಸುದ್ದಿಕಿರಣ ವರದಿ
ಸೋಮವಾರ, ಏಪ್ರಿಲ್ 18

ಸಂಪುಟ ವಿಸ್ತರಣೆ ಕುರಿತು ದೆಹಲಿಯಲ್ಲಿ ವಿಶೇಷ ಸಭೆ
ಬೆಂಗಳೂರು: ಸಂಪುಟ ವಿಸ್ತರಣೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ನವದೆಹಲಿಯಲ್ಲಿ ಕರ್ನಾಟಕದ ಬಗ್ಗೆ ವಿಶೇಷ ಸಭೆ ಕರೆಯುವುದಾಗಿ ತಿಳಿಸಿದ್ದಾರೆ. ಸಭೆಯ ನಂತರ ದೆಹಲಿಗೆ ಬರುವಂತೆ ನಡ್ಡಾ ತಮಗೆ ತಿಳಿಸಿದ್ದಾರೆ. ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಅಲ್ಲಿಯೇ ತೀರ್ಮಾನವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

ಹುಬ್ಬಳ್ಳಿ ಘಟನೆ
ಹುಬ್ಬಳ್ಳಿ ಘಟನೆಗೆ ಸಂಬಂಧಿಸಿದ ಎಲ್ಲರನ್ನೂ ಬಂಧಿಸಲಾಗಿದೆ. ಅದರ ಹಿಂದಿರುವ ನಾಯಕರ ತನಿಖೆಯಾಗಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ಪಿ.ಎಸ್.ಐ ಪರೀಕ್ಷೆಯಲ್ಲಿ ಅಕ್ರಮವಾಗಿರುವ ಕುರಿತು ಗೃಹ ಸಚಿವರ ಗಮನಕ್ಕೆ ಬಂದ ಕೂಡಲೇ ನಿಷ್ಪಕ್ಷಪಾತ ತನಿಖೆಗೆ ಸಿಐಡಿಗೆ ವಹಿಸಲಾಗಿದೆ. ಪರೀಕ್ಷೆಯಾಗಿರುವ ಕೇಂದ್ರದಲ್ಲಿ ಸಮಸ್ಯೆಯಾಗಿದ್ದರೆ, ಅಧೀಕ್ಷಕರ ಮಟ್ಟದಲ್ಲಿ ಸಮಸ್ಯೆ ಅಥವಾ ಮೇಲಧಿಕಾರಿಗಳ ಸಮಸ್ಯೆ ಇದ್ದರೆ ಸಮಗ್ರವಾಗಿ ತನಿಖೆ ಮಾಡಲು ಆದೇಶ ನೀಡಲಾಗಿದೆ. ಬೇರೆ ಪಕ್ಷದ ಸರ್ಕಾರವಾಗಿದ್ದರೆ ಮುಚ್ಚಿಹಾಕಲು ಪ್ರಯತ್ನ ಮಾಡುತ್ತಿದ್ದರು. ನಾವು ಸಿಐಡಿಗೆ ಮುಕ್ತ ಅವಕಾಶ ನೀಡಿದ್ದು, ತನಿಖೆ ಕೈಗೊಂಡಿದ್ದಾರೆ. ಯಾರೇ ತಪ್ಪಿತಸ್ಥರಿದ್ದರೂ ಕ್ರಮ ಕೈಗೊಳ್ಳಲಾಗುವುದು ಎಂದರು.

ಪರೀಕ್ಷೆಗಳನ್ನು ಪುನಃ ಕೈಗೊಳ್ಳಲು ವಿದ್ಯಾರ್ಥಿಗಳು ಒತ್ತಾಯಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸಿಐಡಿ ಸಮಗ್ರ ವರದಿ ನೀಡಿದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!