Wednesday, July 6, 2022
Home ಸಮಾಚಾರ ಜಿಲ್ಲಾ ಸುದ್ದಿ ಸಂಕಷ್ಟ ಸಮಯದಲ್ಲಿ ದೇಶ ಮುನ್ನಡೆಸಿದ ಪ್ರಧಾನಿ

ಸಂಕಷ್ಟ ಸಮಯದಲ್ಲಿ ದೇಶ ಮುನ್ನಡೆಸಿದ ಪ್ರಧಾನಿ

ಉಡುಪಿ: ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದ ಪ್ರಧಾನಿಯಾಗಿ ಕಳೆದ 7 ವರ್ಷದಿಂದ ಯಶಸ್ವಿಯಾಗಿ ದೇಶ ಮುನ್ನಡೆಸುತ್ತಿರುವ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ತಿಳಿಸಿದ್ದಾರೆ.

2014 ಮತ್ತು 2019ರ ಲೋಕಸಭೆ ಚುನಾವಣೆಯಲ್ಲಿ ಪ್ರಚಂಡ ಬಹುಮತದಿಂದ ದೇಶದ ಚುಕ್ಕಾಣಿ ಹಿಡಿದು ಕಳೆದ 7 ವರ್ಷದಲ್ಲಿ ತನ್ನ ಅತ್ಯುತ್ತಮ ಕಾರ್ಯವೈಖರಿಯಿಂದ ದೇಶದ ಸರ್ವತೋಮುಖ ಅಭಿವೃದ್ಧಿಗೆ ಪೂರಕ ಯೋಜನೆಗಳ ಮೂಲಕ ವಿಶ್ವದ ಗಮನ ಸೆಳೆದಿದ್ದಾರೆ.

ಸ್ವಾತಂತ್ರ್ಯ ಪೂರ್ವದಿಂದ ದೇಶದ ಜನರ ಕನಸಾಗಿದ್ದ ಅಯೋಧ್ಯೆ ರಾಮ ಮಂದಿರ ನಿರ್ಮಾಣ, ಆರ್ಟಿಕಲ್ 370 ವಿಧಿ ರದ್ದು, ಜಿಎಸ್.ಟಿ, ಅಂತಾರಾಷ್ಟ್ರೀಯ ನೀತಿಗಳ ಸುಧಾರಣೆ, ನೂತನ ರಾಷ್ಟೀಯ ಶಿಕ್ಷಣ ನೀತಿ, ರಾಷ್ಟ್ರೀಯ ಭದ್ರತೆಯಲ್ಲಿ ದಿಟ್ಟ ನಿಲುವುಗಳ ಮೂಲಕ ದೇಶದ ನಾಗರಿಕರಲ್ಲಿ ಹೊಸ ಭರವಸೆ ಮೂಡಿಸಿದ್ದಾರೆ.

ಕೊರೊನಾ ಮಹಾಮಾರಿಯ ಸಂಕಷ್ಟ ಸಮಯದಲ್ಲಿ ದೇಶವನ್ನು ಸಮರ್ಥವಾಗಿ ಮುನ್ನಡೆಸಿ ವೈದ್ಯಕೀಯ ವ್ಯವಸ್ಥೆ ಸಧೃಢಗೊಳಿಸಿ, ದೇಶದ 130 ಕೋಟಿ ಜನರಿಗೂ ಲಸಿಕೆ ನೀಡಲು ಕ್ರಮ ಕೈಗೊಳ್ಳುವ ಮೂಲಕ ವಿಶ್ವದ ಅತೀ ದೊಡ್ಡ ಲಸಿಕಾ ಅಭಿಯಾನಕ್ಕೆ ಮುಂದಾಗಿರುವ ಪ್ರಧಾನಿ ಮೋದಿ ಅವರನ್ನು ಅಭಿನಂದಿಸುವುದಾಗಿ ಯಶಪಾಲ್ ತಿಳಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!