Sunday, October 2, 2022
Home ಸಮಾಚಾರ ಜಿಲ್ಲಾ ಸುದ್ದಿ ದೇಶ ವಿಭಜನೆ ಅಪೂರ್ವ ಛಾಯಾಚಿತ್ರ ಪ್ರದರ್ಶನ

ದೇಶ ವಿಭಜನೆ ಅಪೂರ್ವ ಛಾಯಾಚಿತ್ರ ಪ್ರದರ್ಶನ

ಸುದ್ದಿಕಿರಣ ವರದಿ
ಶುಕ್ರವಾರ, ಆಗಸ್ಟ್ 12

ದೇಶ ವಿಭಜನೆ ಅಪೂರ್ವ ಛಾಯಾಚಿತ್ರ ಪ್ರದರ್ಶನ
ಉಡುಪಿ: ಜಿಲ್ಲಾಡಳಿತ, ವಾರ್ತೆ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ ವತಿಯಿಂದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಆವರಣದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ 1947ರ ಸ್ವಾತಂತ್ರ್ಯ ಸಂದರ್ಭದಲ್ಲಿ ದೇಶ ವಿಭಜನೆ ಕುರಿತ ಅಪೂರ್ವ ಛಾಯಾಚಿತ್ರ ಪ್ರದರ್ಶನವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ವೀಣಾ ಬಿ.ಎಸ್. ಶುಕ್ರವಾರ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕಿ ಪ್ರತಿಭಾ, ವಾರ್ತಾಧಿಕಾರಿ ಮಂಜುನಾಥ್ ಬಿ., ವಾರ್ತಾ ಸಹಾಯಕ ಬಿ. ಶಿವಕುಮಾರ್, ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗಳು, ವಾರ್ತೆ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಿಬ್ಬಂದಿಗಳು, ಸಾರ್ವಜನಿಕರು ಇದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!