Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ದ.ಕ. ವಿಧಾನ ಪರಿಷತ್: ನಿರೀಕ್ಷಿತ ಫಲಿತಾಂಶ ಪ್ರಕಟ

ದ.ಕ. ವಿಧಾನ ಪರಿಷತ್: ನಿರೀಕ್ಷಿತ ಫಲಿತಾಂಶ ಪ್ರಕಟ

ದ.ಕ. ವಿಧಾನ ಪರಿಷತ್: ನಿರೀಕ್ಷಿತ ಫಲಿತಾಂಶ ಪ್ರಕಟ

ಮಂಗಳೂರು, ಡಿ. 14 (ಸುದ್ದಿಕಿರಣ ವರದಿ): ರಾಜ್ಯದ ವಿಧಾನ ಪರಿಷತ್ ನ 25 ಸ್ಥಾನಗಳಿಗೆ ಡಿ. 10ರಂದು ನಡೆದ ಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದೆ. ಬಿಜೆಪಿ  ಮತ್ತು ಕಾಂಗ್ರೆಸ್ ತಲಾ  11, ಜೆಡಿಎಸ್ 2 ಹಾಗೂ ಪಕ್ಷೇತರ ಅಭ್ಯರ್ಥಿ 1 ಸ್ಥಾನ ಗಳಿಸಿದ್ದಾರೆ.

ದ.ಕ ಜಿಲ್ಲೆಯ ದ್ವಿಸದಸ್ಯ ಪರಿಷತ್ ಕ್ಷೇತ್ರದ ಫಲಿತಾಂಶದಲ್ಲಿ ನಿರೀಕ್ಷಿತ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಅಭ್ಯರ್ಥಿ, ಹಾಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ 4ನೇ ಬಾರಿಗೆ ಗೆಲುವು ಸಾಧಿಸಿದ್ದಾರೆ.

ಮತ ಎಣಿಕೆ ಆರಂಭವಾದಾಗಿನಿಂದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮೊದಲ ಸ್ಥಾನದಲ್ಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಎರಡನೇ ಸ್ಥಾನದಲ್ಲಿದ್ದರು.

ಭಂಡಾರಿ ಚೊಚ್ಚಲ ಪ್ರವೇಶ
ಈ ಬಾರಿ ದ.ಕ ಜಿಲ್ಲೆಯ ದ್ವಿಸದಸ್ಯ ಪರಿಷತ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿಗೆ ಪರಿಷತ್ ಪ್ರವೇಶಿಸುತ್ತಿದ್ದಾರೆ. ಅವರಿಗೆ 2,079 ಮತ ಲಭಿಸಿವೆ.

ಕೋಟ ಶ್ರೀನಿವಾಸ ಪೂಜಾರಿ 3,672 ಮತಗಳೊಂದಿಗೆ ಗೆಲುವು ಸಾಧಿಸಿದ್ದಾರೆ.

ಎಸ್.ಡಿಪಿಐ ಅಭ್ಯರ್ಥಿ ಶಾಫಿ 204 ಮತ ಪಡೆದರೆ, 39 ಮತಗಳು ತಿರಸ್ಕೃತಗೊಂಡಿದೆ.

5,955 ಮತ ಸಿಂಧು
ಒಟ್ಟು 5,955 ಮತಗಳು ಸಿಂಧು ಮತಗಳಾಗಿದ್ದು, ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ 3,672 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ 2,079 ಮತ ಪಡೆದು ಪ್ರಥಮ ಪ್ರಾಶಸ್ತ್ಯದ ಮತದಲ್ಲೇ ವಿಜಯಿಯಾಗಿದ್ದಾರೆ.

ಮತ್ತೊರ್ವ ಅಭ್ಯರ್ಥಿ ಎಸ್.ಡಿ.ಪಿ.ಐ.ನ ಶಾಫಿ ಕೆ. ಬೆಳ್ಳಾರೆ 204 ಮತಗಳನ್ನು ಪಡೆದಿದ್ದಾರೆ.

ಮತ ಎಣಿಕೆ ಕಾರ್ಯ ಇಲ್ಲಿನ ಪಾಂಡೇಶ್ವರದ ರೋಸಾರಿಯೊ ಕಾಲೇಜಿನಲ್ಲಿ ನಡೆಯಿತು.

ಒಟ್ಟು 14 ಟೇಬಲ್ ಗಳಲ್ಲಿ ಮತ ಎಣಿಕೆ ಕಾರ್ಯ ಕೈಗೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಚುನಾವಣಾ ವೀಕ್ಷಕ ಕ್ಯಾ. ಮಣಿವಣ್ಣನ್, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮಂಗಳೂರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ, ಉಡುಪಿ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಕುಮಾರ್, ದ.ಕ. ಹೆಚ್ಚುವರಿ ಜಿಲ್ಲಾಧಿಕಾರಿ ಚನ್ನಬಸಪ್ಪ, ಉಡುಪಿ ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್, ಪುತ್ತೂರು ಸಹಾಯಕ ಆಯುಕ್ತ ಯತೀಶ್ ಉಳ್ಳಾಲ್, ಕುಂದಾಪುರ ಸಹಾಯಕ ಆಯುಕ್ತ ಕೆ. ರಾಜು, ಮಂಗಳೂರು ತಹಶೀಲ್ದಾರ್ ಗುರುಪ್ರಸಾದ್, ಬಂಟ್ವಾಳ ತಹಶೀಲ್ದಾರ್ ರಶ್ಮಿ, ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮಿ, ಪುತ್ತೂರು ತಹಶೀಲ್ದಾರ್ ರಮೇಶ್ ಬಾಬು, ಕಡಬ ತಹಶೀಲ್ದಾರ್ ಅನಂತ ಶಂಕರ್, ಬೆಳ್ತಂಗಡಿ ತಹಶೀಲ್ದಾರ್ ರಮೇಶ್, ಮೂಡುಬಿದಿರೆ ತಹಶೀಲ್ದಾರ್ ಪುಟ್ಟರಾಜ್ ಸೇರಿದಂತೆ ಮತ ಎಣಿಕಾ ಸಿಬ್ಬಂದಿ, ವಿವಿಧ ಪಕ್ಷಗಳ ಏಜೆಂಟರು, ಮುಖಂಡರು, ಸಂಬಂಧಿಸಿದ ಅಧಿಕಾರಿಗಳು ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!