Monday, August 15, 2022
Home ಸಮಾಚಾರ ಜಿಲ್ಲಾ ಸುದ್ದಿ ನಾಳೆ, ನಾಡಿದ್ದು ಶಿಕ್ಷಣ ಸಂಸ್ಥೆಗಳಿಗೆ ರಜೆ

ನಾಳೆ, ನಾಡಿದ್ದು ಶಿಕ್ಷಣ ಸಂಸ್ಥೆಗಳಿಗೆ ರಜೆ

ಸುದ್ದಿಕಿರಣ ವರದಿ
ಗುರುವಾರ, ಜುಲೈ 7

ನಾಳೆ, ನಾಡಿದ್ದು ಶಿಕ್ಷಣ ಸಂಸ್ಥೆಗಳಿಗೆ ರಜೆ
ಉಡುಪಿ: ಭಾರೀ ಮಳೆಯ ಕಾರಣದಿಂದಾಗಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶುಕ್ರವಾರ ಮತ್ತು ಶನಿವಾರವೂ ರಜಾ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮರಾವ್ ಪ್ರಕಟಣೆ ನೀಡಿದ್ದಾರೆ.

ಜುಲೈ 9ರ ವರೆಗೆ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ ಮತ್ತು ಖಾಸಗಿ ಪ್ರಾಥಮಿಕ ಮತ್ತು‌ ಪ್ರೌಢಶಾಲೆ, ಪದವಿ ಮತ್ತು ಪದವಿಪೂರ್ವ ಕಾಲೇಜು, ಡಿಪ್ಲೊಮಾ, ಐಟಿಐ, ಇಂಜಿನಿಯರಿಂಗ್ ಕಾಲೇಜು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜಾ ಘೋಷಿಸಲಾಗಿದೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!