ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ. ನಾಗಭೂಷಣ ಉಡುಪ ನೇಮಕಗೊಂಡಿದ್ದಾರೆ.
ಪ್ರಸ್ತುತ ಅವರು ಕುಂದಾಪುರ ತಾಲೂಕು ಆರೋಗ್ಯಾಧಿಕಾರಿಯಾಗಿದ್ದು, ಅವರನ್ನು ಡಿ.ಎಚ್.ಓ ಆಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪ್ರಸ್ತುತ ಜಿಲ್ಲಾ ಆರೋಗ್ಯಾಧಿಕಾರಿಯಾಗಿರುವ ಡಾ. ಸುಧೀರಚಂದ್ರ ಸೂಡ ಈ ತಿಂಗಳ 31ರಂದು ಸೇವಾ ನಿವೃತ್ತರಾಗಲಿದ್ದು, ಅವರ ಸ್ಥಾನಕ್ಕೆ ಡಾ. ಉಡುಪ ಅವರನ್ನು ನೇಮಕ ಮಾಡಲಾಗಿದೆ.
ಮೂಲತಃ ಕುಂದಾಪುರ ತಾಲೂಕಿನವರಾದ ನಾಗಭೂಷಣ ಉಡುಪ ಅವರು ಶಂಕರನಾರಾಯಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಬಳಿಕ ಉಡುಪಿಯಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ ವಿಭಾಗದ ವೈದ್ಯಾಧಿಕಾರಿಯಾಗಿದ್ದರು.