Saturday, July 2, 2022
Home ಸಮಾಚಾರ ಜಿಲ್ಲಾ ಸುದ್ದಿ ನೂತನ ಸಚಿವರಿಗೆ ಬಿಜೆಪಿ ಅಭಿನಂದನೆ

ನೂತನ ಸಚಿವರಿಗೆ ಬಿಜೆಪಿ ಅಭಿನಂದನೆ

ನೂತನ ಸಚಿವರಿಗೆ ಬಿಜೆಪಿ ಅಭಿನಂದನೆ

(ಸುದ್ದಿಕಿರಣ ವರದಿ)
ಉಡುಪಿ: ಬೊಮ್ಮಾಯಿ ಸಂಪುಟಕ್ಕೆ ಸೇರ್ಪಡೆಗೊಂಡ ಜಿಲ್ಲೆಯ ನೂತನ ಸಚಿವರನ್ನು ಬಿಜೆಪಿ ಅಭಿನಂದಿಸಿದೆ.

ಮೂರನೇ ಬಾರಿ ಸಚಿವರಾಗಿ ಆಯ್ಕೆಗೊಂಡು ಪ್ರಮಾಣ ವಚನ ಸ್ವೀಕರಿಸಿರುವ ಜಿಲ್ಲೆಯ ಸರಳ ಸಜ್ಜನಿಕೆಯ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹಾಗೂ ನೂತನ ಸಚಿವರಾಗಿ ಅಯ್ಕೆಯಾದ ಸಂಘಟನಾ ಚತುರ, ಯುವ ನಾಯಕ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರಿಗೆ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಭಿನಂದನೆ ಸಲ್ಲಿಸಿದ್ದಾರೆ.

ಈ ಬಾರಿ ಮೊತ್ತ ಮೊದಲ ಬಾರಿಗೆ ಏಕಕಾಲದಲ್ಲಿ ಉಡುಪಿ ಜಿಲ್ಲೆಗೆ ಅವಳಿ ಸಚಿವರನ್ನು ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಅಭಿನಂದಿಸುವುದಾಗಿ ಕುಯಿಲಾಡಿ ತಿಳಿಸಿದ್ದಾರೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!