ಸುದ್ದಿಕಿರಣ ವರದಿ
ಮಂಗಳವಾರ, ಜುಲೈ 12
ದ.ಕ. ನೆರೆಪೀಡಿತ ಪ್ರದೇಶಗಳಿಗೆ ಸಿಎಂ ಭೇಟಿ
ಮಂಗಳೂರು: ಕಳೆದ ಹಲವು ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಅಪಾರ ಹಾನಿಯಾಗಿದ್ದು, ಮಂಗಳವಾರ ನೆರೆ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಂಟ್ವಾಳ ತಾಲೂಕಿನಲ್ಲಿ ಮಣ್ಣು ಕುಸಿತದಿಂದ ಈಚೆಗೆ ಸಾವನ್ನಪ್ಪಿದ ಕೇರಳ ಮೂಲದ ಮೂವರು ವ್ಯಕ್ತಿಗಳ ವಾರಸುದಾರರಿಗೆ ತಲಾ 5 ಲಕ್ಷ ರೂ. ಮೊತ್ತದ ಪರಿಹಾರ ಚೆಕ್ ವಿತರಿಸಿದರು.
ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ್, ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಮೀನುಗಾರಿಕೆ ಸಚಿವ ಎಸ್. ಅಂಗಾರ, ಸಂಸದ ನಳಿನ್ ಕುಮಾರ್ ಕಟೀಲ್ ಮೊದಲಾದವರಿದ್ದರು.
ಅದಕ್ಕೂ ಮುನ್ನ ಸಿಎಂ ಬೊಮ್ಮಾಯಿ ಈಚೆಗೆ ಸುಳ್ಯದಲ್ಲಿ ಭೂಕಂಪನದಿಂದಾಗಿ ಹಾನಿಗೊಳಗಾದ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಉಪ್ಪಿನಂಗಡಿ ಪರಿಸರದಲ್ಲಿ ಉಂಟಾಗಿರುವ ನೆರೆ ಹಾನಿ ಹಾಗೂ ನೇತ್ರಾವತಿ ಮತ್ತು ಕುಮಾರಧಾರಾ ನದಿ ಸಂಗಮ ಸ್ಥಳವನ್ನು ಮಂಗಳವಾರ ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೀಕ್ಷಿಸಿದರು.