Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ಕೋವಿಡ್ ನೋಡಲ್ ಅಧಿಕಾರಿಗಳೊಂದಿಗೆ ಸಭೆ

ಕೋವಿಡ್ ನೋಡಲ್ ಅಧಿಕಾರಿಗಳೊಂದಿಗೆ ಸಭೆ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ 19 ಸಂಬಂಧ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗುವ ಸೋಂಕಿತರಿಗೆ ಆಸ್ಪತ್ರೆಯಲ್ಲಿ ಬೆಡ್ ವ್ಯವಸ್ಥೆ ಹಾಗೂ ತೀರಾ ಅಗತ್ಯವಿದ್ದಲ್ಲಿ ಆಕ್ಸಿಜನ್ ಬೆಡ್, ಐಸಿಯು, ವೆಂಟಿಲೇಟರ್ ಸೇರಿದಂತೆ ಎಲ್ಲಾ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಅವರ ಕಾರ್ಯಭಾರ ಹಾಗೂ ಜವಾಬ್ದಾರಿ ಬಗ್ಗೆ ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ ಭಟ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.

ಸಭೆಯಲ್ಲಿ ಭಾಗವಹಿಸಿದ ಶಾಸಕ ಕೆ. ರಘುಪತಿ ಭಟ್, ಕೋವಿಡ್ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಸಮಸ್ಯೆ ಆಗದ ರೀತಿಯಲ್ಲಿ ತಮ್ಮ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಲು ಸೂಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಸಹಾಯಕ ಆಯುಕ್ತ ರಾಜು, ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ನೇಮಕಗೊಂಡ ನೋಡಲ್ ಅಧಿಕಾರಿಗಳು ಇದ್ದರು.

 

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!