ಸುದ್ದಿಕಿರಣ ವರದಿ
ಬುಧವಾರ, ಜನವರಿ 12, 2022
ಲಾಕ್ ಡೌನ್ ಬದಲು ಪರ್ಯಾಯ ಯೋಜನೆ ಜಾರಿಗೆ ತನ್ನಿ
ಮಂಗಳೂರು: ದಿನೇ ದಿನೇ ಹೆಚ್ಚುತ್ತಿರುವ ಕೋವಿಡ್ ನಿಯಂತ್ರಣಕ್ಕೆ ವಾರಾಂತ್ಯದ ಕರ್ಫ್ಯೂ ಮತ್ತು ಲಾಕ್ ಡೌನ್ ಬದಲು ಸರ್ಕಾರ ಪರ್ಯಾಯ ಯೋಜನೆ ಜಾರಿಗೆ ತರಬೇಕು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಸಲಹೆ ನೀಡಿದ್ದಾರೆ.
ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾನಾಡಿದ ಅವರು, ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ವಿಧಿಸುವ ವಾರಾಂತ್ಯ ಕರ್ಪ್ಯೂ ಮತ್ತು ಲಾಕ್ ಡೌನ್ ಮುಂತಾದ ಕಠಿಣ ಕ್ರಮಗಳು ಸಾರ್ವಜನಿಕರ ಮೇಲೆ ಪರಿಣಾಮ ಬೀರುತ್ತದೆ.
ಈ ಹಿಂದೆ ವಿಧಿಸಲಾಗಿದ್ದ ಲಾಕ್ ಡೌನ್ ನಿಂದ ಬಹಳಷ್ಟು ಜನರು ಉದ್ಯೋಗ, ವ್ಯವಹಾರಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನಜೀವನಕ್ಕೆ ತೊಂದರೆಯಾಗುವಂಥ ವಾರಾಂತ್ಯದ ಕರ್ಫ್ಯೂ ಮತ್ತು ಲಾಕ್ ಡೌನ್ ವಿಧಿಸುವ ಮುನ್ನ ಸರ್ಕಾರ ಮರುಚಿಂತನೆ ಮಾಡಬೇಕು ಎಂದು ಹೇಳಿದರು.
ಲಾಕ್ ಡೌನ್, ವಿಕೇಂಡ್ ಕರ್ಫ್ಯೂ ವಿಧಿಸುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ ಎಂದ ಅವರು, ಸರ್ಕಾರ ಲಾಕ್ ಡೌನ್ ಮತ್ತು ವಾರಾಂತ್ಯದ ಕರ್ಫ್ಯೂ ಜಾರಿಗೆ ತರುವ ಮುನ್ನ ಮುಂದಾಲೋಚನೆ ಮಾಡಬೇಕು. ಸಾಂಕ್ರಾಮಿಕ ರೋಗ ಎದುರಿಸಲು ಸರ್ಕಾರ ಪರ್ಯಾಯ ಮಾರ್ಗದ ಬಗ್ಗೆ ಚಿಂತಿಸಬೇಕು. ಯಾವುದೇ ನಿರ್ಬಂಧ ವಿಧಿಸುವ ಮುನ್ನ ಸರ್ಕಾರ ಸಾರ್ವಜನಿಕರಿಗೆ ಸೂಕ್ತ ಸೌಲಭ್ಯ ನೀಡಬೇಕು ಎಂದು ರೈ ಸಲಹೆ ನೀಡಿದರು