ಸುದ್ದಿಕಿರಣ ವರದಿ
ಭಾನುವಾರ, ಜುಲೈ 24
ಪುತ್ತಿಗೆಶ್ರೀ ತುಲಾಭಾರ
ಸುರತ್ಕಲ್: ಪುತ್ತಿಗೆ ಮಠದ ಶಾಖೆ, ನವ ವೃಂದಾವನ ಸೇವಾ ಪ್ರತಿಷ್ಠಾನ ಶ್ರೀ ರಾಘವೇಂದ್ರಸ್ವಾಮಿ ಮಠ ಕುಳಾಯಿ ಹೊಸಬೆಟ್ಟು ಸಂಸ್ಥಾಪನಾ ರಜತ ಮಹೋತ್ಸವ ಸಂದರ್ಭದಲ್ಲಿ ಭಾವಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಗೆ ತುಲಾಭಾರ ನೆರವೇರಿಸಿ, ರಜತ ಕಿರೀಟ ತೊಡಿಸಲಾಯಿತು.
ಕಟೀಲು ಕ್ಷೇತ್ರದ ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ, ಮಂಗಳೂರು ಉತ್ತರ ಕ್ಷೇತ್ರ ಶಾಸಕ ಡಾ. ಭರತ್ ಶೆಟ್ಟಿ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ, ಕಸಾಪ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು, ಶ್ರೀ ಶರವು ಮಹಾಗಣಪತಿ ದೇವಸ್ಥಾನದ ಮೊಕ್ತೇಸರ ಶ್ರೀ ರಾಘವೇಂದ್ರ ಶಾಸ್ತ್ರಿ, ಜ್ಯೋತಿಷಿ ನಾಗೇಂದ್ರ ಭಾರದ್ವಾಜ್, ವರುಣ್ ಚೌಟ, ಶ್ರೀಮಠದ ರಾಘವೇಂದ್ರ ಎಚ್.ವಿ. ಮೊದಲಾದವರಿದ್ದರು.