ಕಲ್ಯಾಣ್ ಸಿಂಗ್ ನಿಧನಕ್ಕೆ ಪೇಜಾವರಶ್ರೀ ಸಂತಾಪ
(ಸುದ್ದಿಕಿರಣ ವರದಿ)
ಬೆಂಗಳೂರು: ಉತ್ತರ ಪ್ರದೇಶ ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕ ಕಲ್ಯಾಣ್ ಸಿಂಗ್ ನಿಧನಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಸಂತಾಪ ವ್ತಕ್ತಪಡಿಸಿದ್ದಾರೆ.
ಶೋಕ ಸಂದೇಶ ನೀಡಿರುವ ಅವರು, ‘ಅಯೋಧ್ಯೆ ಶ್ರೀರಾಮ ಜನ್ಮಭೂಮಿ ಆಂದೋಲನದಲ್ಲಿ ಸದಾ ಸ್ಮರಣೀಯ ಪಾತ್ರ ವಹಿಸಿದ್ದ ಹಿರಿಯ ಮುತ್ಸದ್ಧಿ ಕಲ್ಯಾಣ್ ಸಿಂಗ್ ನಿಧನದಿಂದ ವಿಷಾದವಾಗಿದೆ.
ಹಿಂದೂ ಸಿದ್ಧಾಂತಕ್ಕೆ ಬದ್ಧರಾಗಿದ್ದ ಅವರು, ನಮ್ಮ ಗುರುಗಳಾದ ಶ್ರೀ ವಿಶ್ವೇಶತೀರ್ಥ ಶ್ರೀಪಾದರೊಂದಿಗೂ ವಿಶೇಷ ಆತ್ಮೀಯ ಬಾಂಧವ್ಯ ಹೊಂದಿದ್ದರು.
ಅವರ ಆತ್ಮಕ್ಕೆ ಸದ್ಗತಿ ಪ್ರಾಪ್ತವಾಗಲಿ ಎಂದು ನಮ್ಮ ಆರಾಧ್ಯಮೂರ್ತಿ ಅಯೋಧ್ಯಾಪತಿ ಶ್ರೀ ರಾಮಚಂದ್ರ ದೇವರಲ್ಲಿ ಪ್ರಾರ್ಥಿಸುತ್ತೇವೆ’ ಎಂದು ಅಯೋಧ್ಯಾ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವಿಶ್ವಸ್ಥರೂ ಆಗಿರುವ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತಿಳಿಸಿದ್ದಾರೆ.