ಸುದ್ದಿಕಿರಣ ವರದಿ
ಬುಧವಾರ, ಜುಲೈ 6
ರಾಜ್ಯಸಭೆಗೆ ಹೆಗ್ಗಡೆ: ಪೇಜಾವರಶ್ರೀ ಹರ್ಷ
ಉಡುಪಿ: ಕೇಂದ್ರ ಸರ್ಕಾರ, ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ಡಾl ಡಿ. ವೀರೇಂದ್ರ ಹೆಗ್ಗಡೆಯವರನ್ಬು ರಾಜ್ಯಸಭೆ ಸದಸ್ಯರನ್ನಾಗಿ ನಾಮನಿರ್ದೇಶನಗೊಳಿಸಿರುವುದಕ್ಕೆ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಸಂತಸ ವ್ಯಕ್ತಪಡಿಸಿದ್ದಾರೆ.ಶ್ರೀಕ್ಷೇತ್ರದ ಮೂಲಕ ರಾಷ್ಟ್ರದ ಏಳಿಗೆಗೆ ಬಹುಮುಖಿ ಹಾಗೂ ಅತ್ಯಂತ ಪರಿಣಾಮಕಾರಿಯಾದ ಕೊಡುಗೆ ಮತ್ತು ಕೈಂಕರ್ಯ ನಿರ್ವಹಿಸುತ್ತಿರುವ ಹೆಗ್ಗಡೆಯವರ ನಿಯುಕ್ತಿಯಿಂದ ರಾಜ್ಯಸಭೆಯ ಘನತೆ ವೃದ್ಧಿಸಿದೆ. ನಾವು ಮಾತ್ರವಲ್ಲ, ಇಡೀ ನಾಡೇ ಈ ಆಯ್ಕೆಯಿಂದ ಸಂತಸಪಡುವಂತಾಗಿದೆ.
ಡಾl ಹೆಗ್ಗಡೆಯವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರಿಗೆ ಶ್ರೀಕೃಷ್ಣಮುಖ್ಯಪ್ರಾಣರ ಪೂರ್ಣಾನುಗ್ರಹ ಪ್ರಾರ್ಥಿಸುವುದಾಗಿ ಎಂದು ಶ್ರೀಗಳು ಸಂದೇಶ ನೀಡಿದ್ದಾರೆ .