Saturday, August 13, 2022
Home ಸಮಾಚಾರ ಜಿಲ್ಲಾ ಸುದ್ದಿ ಪ್ರವೀಣ್ ಹತ್ಯೆ: ಪೇಜಾವರಶ್ರೀ ಕಳವಳ

ಪ್ರವೀಣ್ ಹತ್ಯೆ: ಪೇಜಾವರಶ್ರೀ ಕಳವಳ

ಸುದ್ದಿಕಿರಣ ವರದಿ
ಬುಧವಾರ, ಜುಲೈ 27

ಪ್ರವೀಣ್ ಹತ್ಯೆ: ಪೇಜಾವರಶ್ರೀ ಕಳವಳ
ಉಡುಪಿ: ದ.ಕ‌. ಜಿಲ್ಲೆಯ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ದುಷ್ಕರ್ಮಿಗಳು ಹಿಂದೂ ಸಂಘಟನೆಯ ಧುರೀಣ ಪ್ರವೀಣ್ ಹತ್ಯೆಗೈದಿರುವ ಘಟನೆ ಬಗ್ಗೆ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಇಂಥ ಹೇಯ ಕೃತ್ಯ ನಾಗರಿಕ ಸಮಾಜವೇ ತಲೆ ತಗ್ಗಿಸುವಂಥದ್ದಾಗಿದೆ.

ಮೃತ ಪ್ರವೀಣ್ ಆತ್ಮಕ್ಕೆ ಸದ್ಗತಿ ದೊರೆಯಲಿ ಮತ್ತು ಅವರ ಕುಟುಂಬಸ್ಥರಿಗೆ ದುಃಖ ಸಹಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿರುವ ಶ್ರೀಗಳು, ನಾಡಿನಲ್ಲಿ ಇಂಥ ದುಷ್ಕೃತ್ಯಗಳು ಮೇಲಿಂದ ಮೇಲೆ ನಡೆಯುತ್ತಿರುವುದರಿಂದ ಜನಾಕ್ರೋಶಗೊಂಡು ಸರ್ಕಾರದ ಮೇಲೆ ವಿಶ್ವಾಸವನ್ನೇ ಕಳೆದುಕೊಳ್ಳುವ ಸ್ಥಿತಿ ತಲುಪುತ್ತಿರುವಂತಿದೆ. ಅದಕ್ಕೂ ಮೊದಲೇ ಸರ್ಕಾರ ಇಂಥ ಪಾತಕಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶ್ರೀಗಳು ಒತ್ತಾಯಿಸಿದ್ದಾರೆ.

ಧೈರ್ಯ ಕಳಕಳೊಳ್ಳಬೇಡಿ
ಪ್ರವೀಣ್ ಹತ್ಯೆಯಿಂದ ನಾಡಿನ ಸಹಸ್ರಾರು ಹಿಂದೂ ಯುವ ಕಾರ್ಯಕರ್ತರ ಆಕ್ರೋಶ ಉಲ್ಬಣಿಸಲು ಕಾರಣವಾಗುತ್ತಿದೆ. ಇತ್ತೀಚೆಗಷ್ಟೆ ಹರ್ಷ ಹತ್ಯೆಯ ದುಃಖ, ನೋವಿನಿಂದ ಹೊರಬರುವ ಹೊತ್ತಿಗೇ ಇನ್ನೊಬ್ಬ ತರುಣನ ಕೊಲೆಯಾಗಿರುವುದು ಸಹನೆಯ ಕಟ್ಟೆ ಒಡೆಯುವಷ್ಟು ದುಃಖ ಆಕ್ರೋಶ ತರಿಸುವುದು ಸಹಜವೇ ಆಗಿದ್ದರೂ ಯಾರೊಬ್ಬರೂ ಧೈರ್ಯ ಕಳೆದುಕೊಳ್ಳಬಾರದು.

ಸಂಯಮದಿಂದಿದ್ದು ಒಗ್ಗಟ್ಟು ಕಾಯ್ದುಕೊಂಡು ಕೆಲಸ ಮಾಡಬೇಕಾಗಿದೆ.

ನಾವೂ ತಮ್ಮೆಲ್ಲರ ನೋವಿನಲ್ಲಿ ಸಹಾನುವರ್ತಿಗಳು ಎಂದು ಪೇಜಾವರ ಶ್ರೀಗಳು ತಿಳಿಸಿದ್ದಾರೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!