Thursday, July 7, 2022
Home ಸಮಾಚಾರ ಅಪರಾಧ ತಲೆಗೆ ಗುಂಡು ಹಾರಿಸಿಕೊಂಡು ಪೇದೆ ಆತ್ಮಹತ್ಯೆ

ತಲೆಗೆ ಗುಂಡು ಹಾರಿಸಿಕೊಂಡು ಪೇದೆ ಆತ್ಮಹತ್ಯೆ

ಸುದ್ದಿಕಿರಣ ವರದಿ
ಶುಕ್ರವಾರ, ಏಪ್ರಿಲ್ 29

ತಲೆಗೆ ಗುಂಡು ಹಾರಿಸಿಕೊಂಡು ಪೇದೆ ಆತ್ಮಹತ್ಯೆ
ಉಡುಪಿ: ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯನಿರತ ಪೊಲೀಸ್ ಪೇದೆಯೋರ್ವರು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆದಿವುಡುಪಿ ಶಾಲೆಯಲ್ಲಿ ವರದಿಯಾಗಿದೆ.

ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ರಾಜೇಶ್ ಕುಂದರ್ ಆತ್ಮಹತ್ಯೆ ಮಾಡಿಕೊಂಡವರು.

ಆದಿವುಡುಪಿ ಖಿನ್ನತೆ ಘಟನೆಗೆ ಕಾರಣ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಾಗಿದೆ.

2022ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಮೌಲ್ಯ ಮಾಪನ ಕೇಂದ್ರವಾಗಿದ್ದ ಆದಿವುಡುಪಿ ಶಾಲೆಯಲ್ಲಿ ರಾಜೇಶ್ ಕುಂದರ್ ಭದ್ರತೆಗೆ ನಿಯೋಜನೆಗೊಂಡಿದ್ದು, ಕರ್ತವ್ಯ ನಿರ್ವಹಿಸುತ್ತಿದ್ದರು.

ಭದ್ರತೆಗಾಗಿ ನಿಯೋಜನೆಗೊಂಡಿದ್ದ ಅವರು ಶುಕ್ರವಾರ ಬೆಳಗ್ಗೆ ತಮ್ಮದೇ ಸರ್ವೀಸ್ ಬಂದೂಕಿನಿಂದ ಗುಂಡು ಹಾರಿಸಿಕೊಂಡಿದ್ದಾರೆ.

ಒಂದು ತಿಂಗಳ ಹಿಂದೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಬ್ಬಂದಿ ನಡುವೆ ಹೊಡೆದಾಟ ನಡೆದಿದ್ದು, ರಾಜೇಶ್ ಕುಂದರ್ ಅವರನ್ನು ಅಮಾನತುಗೊಳಿಸಲಾಗಿತ್ತು.

ಮೃತರಿಗೆ ಪತ್ನಿ ಹಾಗೂ ಅವಳಿ ಮಕ್ಕಳೀರ್ವರಿದ್ದಾರೆ.

ಘಟನೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತನಿಖೆಗೆ ಆಗ್ರಹ
ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ಸಂದೀಪ್ ಪ್ರತಿಕ್ರಿಯೆ ನೀಡಿ, ರಾಜೇಶ್ ಕುಂದರ್ ಸಾವಿಗೆ ಉಮೇಶ್ ಹಾಗೂ ಆತನ ಸ್ನೇಹಿತ ಮಹಮ್ಮದ್ ಅಶ್ಪಕ್ ಕಾರಣ. ಅವರಿಬ್ಬರೂ ಮಾನಸಿಕ ಹಿಂಸೆ ನೀಡುತ್ತಿದ್ದರು ಎಂದು ಕುಂದರ್ ಮನೆಯವರು ನೇರ ಆರೋಪ ಮಾಡಿದ್ದಾರೆ.

ಘಟನೆ ಬಗ್ಗೆ ತನಿಖೆಯಾಗಬೇಕು ಮತ್ತು ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದು ಸಂದೀಪ್ ಒತ್ತಾಯಿಸಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!