Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ಕಡಿಯಾಳಿ ಪ್ರಚಾರ ಕೊಡೆ ಬಡವರಿಗೆ ವಿತರಣೆ

ಕಡಿಯಾಳಿ ಪ್ರಚಾರ ಕೊಡೆ ಬಡವರಿಗೆ ವಿತರಣೆ

ಸುದ್ದಿಕಿರಣ ವರದಿ
ಮಂಗಳವಾರ, ಜೂನ್ 14

ಕಡಿಯಾಳಿ ಪ್ರಚಾರ ಕೊಡೆ ಬಡವರಿಗೆ ವಿತರಣೆ
ಉಡುಪಿ: ವೈಭವದಿಂದ ಬ್ರಹ್ಮಕಲಶೋತ್ಸವ ಸಂಪನ್ನಗೊಂಡ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಾಲಯಕ್ಕೆ ಮಂಗಳವಾರ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು.

ರಾಷ್ಟ್ರಕ್ಕೇ ಮಾದರಿ
ದೇಗುಲದ ಕಾಮಗಾರಿ ವೀಕ್ಷಿಸಿ ಹರ್ಷ ವ್ಯಕ್ತಪಡಿಸಿದ ಸಚಿವೆ ಕರಂದ್ಲಾಜೆ, ಕಡಿಯಾಳಿ ಮಹಿಷಮರ್ದಿನಿ ದೇಗುಲದ ಶಿಲ್ಪಕಲೆ, ತಿರುಗುವ ಮುಚ್ಚಿಗೆ, ಕಾಷ್ಠಶಿಲ್ಪ ಮತ್ತು ಕರಸೇವಕರ ಮೂಲಕ ದೇಗುಲದ ತಳಪಾಯ ಮತ್ತು ನಿರಂತರ ಶಿಸ್ತುಬದ್ಧ ಸ್ವಯಂಸೇವಕರ ಪಡೆ ಕೇವಲ ರಾಜ್ಯ ಮಾತ್ರವಲ್ಲದೆ ರಾಷ್ಟ್ರಕ್ಕೇ ಮಾದರಿ ಎಂದರು.

ಈ ರೀತಿಯ ಭವ್ಯ ದೇಗುಲ ಗ್ರಾಮಸ್ಥರು ಮತ್ತು ದೇವರ ಪರಮ ಭಕ್ತರು ಸೇರಿ ಕಟ್ಟಿ ಭಗವಂತನಿಗೆ ಸಮರ್ಪಣೆ ಮಾಡಿರುವುದು ಸಂತಸದಾಯಕ. ಸರ್ವರಿಗೂ ಜಗನ್ಮಾತೆ ಮಹಿಷಮರ್ದಿನಿ ಸನ್ಮಂಗಲವುಂಟುಮಾಡಲಿ ಎಂದು ಹಾರೈಸಿದರು.

ತಾನು ಕೂಡಾ ಕರಸೇವೆಯಲ್ಲಿ ಸ್ವಯಂಸೇವಕಿಯಾಗಿ ಭಾಗವಹಿಸಿರುವುದು ತನ್ನ ಸೌಭಾಗ್ಯ ಎಂದು ಸ್ಮರಿಸಿದರು.

ಕೊಡೆ ವಿತರಣೆ
ಈ ಸಂದರ್ಭದಲ್ಲಿ ದೇವ ಸೇವೆ ಸಮಾಜ ಸೇವೆ ಎಂಬ ವಿಶಿಷ್ಟ ಪರಿಕಲ್ಪನೆಯಲ್ಲಿ ಬ್ರಹ್ಮಕಲಶೋತ್ಸವ ಪ್ರಚಾರಕ್ಕೆ ಬಳಸಿದ ಕೊಡೆಯನ್ನು ಉಡುಪಿ ನಿವಾಸಿ ಶರ್ವಾಣಿ ಎಂಬವರಿಗೆ ಹಸ್ತಾಂತರಿಸಲಾಯಿತು.

ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ. ರಾಘವೇಂದ್ರ ಕಿಣಿ ದೇವಳದ ಕಾಮಗಾರಿಯ ವಿವರಣೆ ನೀಡಿದರು.

ದೇವಳದ ಪ್ರಧಾನ ಅರ್ಚಕ ಕೆ. ರಾಧಾಕೃಷ್ಣ ಉಪಾಧ್ಯಾಯ, ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿ ಸದಸ್ಯರಾದ ಸಂಧ್ಯಾ ಪ್ರಭು, ಶಶಿಕಲಾ ಭರತ್ ಮತ್ತು ಮಂಜುನಾಥ ಹೆಬ್ಬಾರ್, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಮಂಡಳಿ ಸದಸ್ಯೆ ಸಂಧ್ಯಾ ರಮೇಶ್, ನಗರಸಭಾ ಸದಸ್ಯೆ ಗೀತಾ ಶೇಟ್, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷೆ ಭಾರತಿ ಚಂದ್ರಶೇಖರ್, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಸುಜಾತ ಸತೀಶ್, ಚೇತನಾ ಚಂದ್ರಶೇಖರ್ ಪ್ರಭು, ಸಾಮಾಜಿಕ ಧುರೀಣ ಪ್ರದೀಪ್ ರಾವ್, ದೇವಸ್ಥಾನದ ಅಧಿಕಾರಿ ಗಂಗಾಧರ ಹೆಗ್ಡೆ ಇದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!