Thursday, July 7, 2022
Home ಸಮಾಚಾರ ರಾಜ್ಯ ವಾರ್ತೆ ತುರ್ತು ಪರಿಸ್ಥಿತಿ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ

ತುರ್ತು ಪರಿಸ್ಥಿತಿ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ

ಬೆಂಗಳೂರು: 1975ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಇಡೀ ರಾಷ್ಟ್ರದಲ್ಲಿ ತುರ್ತು ಪರಿಸ್ಥಿತಿ ಹೇರುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯ ಕಗ್ಗೊಲೆ ಮಾಡಿದ್ದರು ಎಂದು ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದರು.

ತುರ್ತು ಪರಿಸ್ಥಿತಿ ಕರಾಳ ದಿನಾಚರಣೆ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸೆರೆಮನೆ ವಾಸ ಶಿಕ್ಷೆ ಅನುಭವಿಸಿದ್ದ ಗಾಯತ್ರಿ ಹನುಮಂತ ರಾವ್ ಅವರನ್ನು ಬೆಂಗಳೂರಿನ ಅವರ ನಿವಾಸಕ್ಕೆ ತೆರಳಿ ಗೌರವಿಸಿದರು.

ಉದರದಲ್ಲಿ ತನ್ನ ಮೊದಲನೆಯ ಮಗು ಹೊತ್ತಿದ್ದ ಗಾಯತ್ರಿ ರಾವ್ ಅವರನ್ನು ತುಂಬು ಗರ್ಭಿಣಿ ಎಂದೂ ಪರಿಗಣಿಸದೇ ಅಂದಿನ ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸರಕಾರ ಸೆರೆಮನೆಗೆ ತಳ್ಳಿತ್ತು. ಗಾಯತ್ರಿ ರಾವ್ ಸೆರೆಮನೆಯಲ್ಲಿಯೇ ಮಗುವಿಗೆ ಜನ್ಮ ನೀಡಿದ್ದರು.

ಇಂಥ ಲಕ್ಷಾಂತರ ಜನರನ್ನು ಅಂದಿನ ಇಂದಿರಾ ಗಾಂಧಿ ಸರಕಾರ ನಿರ್ದಯವಾಗಿ ಬಂಧಿಸಿ ಜೈಲಿಗಟ್ಟಿತ್ತು. ದೇಶದ ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಕೆಲಸವನ್ನು ಅಂದಿನ ಕಾಂಗ್ರೆಸ್ ಸರಕಾರ ಮಾಡಿತ್ತು. ತುರ್ತು ಪರಿಸ್ಥಿತಿ ಸಂದರ್ಭ ದೇಶ ಕಂಡ ಅತ್ಯಂತ ಕರಾಳ ಸಮಯ ಎಂದು ಸಂಸದೆ ಶೋಭಾ ವಿಶ್ಲೇಷಿಸಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!