Wednesday, July 6, 2022
Home ಸಮಾಚಾರ ಜಿಲ್ಲಾ ಸುದ್ದಿ ಮಕ್ಕಳಲ್ಲಿರುವ ಸುಪ್ತ ಪ್ರತಿಭೆ ಅನಾವರಣಗೊಳಿಸಲು ಸೂಕ್ತ ವೇದಿಕೆ ಅಗತ್ಯ

ಮಕ್ಕಳಲ್ಲಿರುವ ಸುಪ್ತ ಪ್ರತಿಭೆ ಅನಾವರಣಗೊಳಿಸಲು ಸೂಕ್ತ ವೇದಿಕೆ ಅಗತ್ಯ

ಮಕ್ಕಳಲ್ಲಿರುವ ಸುಪ್ತ ಪ್ರತಿಭೆ ಅನಾವರಣಗೊಳಿಸಲು ಸೂಕ್ತ ವೇದಿಕೆ ಅಗತ್ಯ

ಮೂಲ್ಕಿ, ಡಿ. 12 (ಸುದ್ದಿಕಿರಣ ವರದಿ): ಪ್ರತಿಯೊಂದು ಮಕ್ಕಳಲ್ಲೂ ಒಂದಲ್ಲ ಒಂದು ಪ್ರತಿಭೆ ಇರುತ್ತದೆ. ಅದನ್ನು ಹೊರಹಾಕಲು ಸೂಕ್ತ ವೇದಿಕೆ ಕಲ್ಪಿಸುವುದು ಅಗತ್ಯ.

ಈ ನಿಟ್ಟಿನಲ್ಲಿ ಸತತ ಐದು ವರ್ಷದಿಂದ ಪುನರೂರು ಪ್ರತಿಷ್ಠಾನ, ಪ್ರತಿಭಾ ಸೌರಭದ ಮೂಲಕ ಪ್ರೌಢಶಾಲಾ ಮಕ್ಕಳಿಗೆ ಅವಕಾಶ ನೀಡುತ್ತಿರುವುದು ಗ್ರಾಮೀಣ ಪ್ರದೇಶದ ಮಕ್ಕಳಿಗೆ ವರದಾನವಾಗಿ ಪರಿಣಮಿಸಿದೆ ಎಂದು ಉಡುಪಿ ವಲಯ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಅಧ್ಯಕ್ಷ ಜನಾರ್ದನ ಕೊಡವೂರು ಹೇಳಿದರು.

ಪುನರೂರು ಪ್ರತಿಷ್ಠಾನ ಆಶ್ರಯದಲ್ಲಿ ಜನವಿಕಾಸ ಸಮಿತಿ ಮೂಲ್ಕಿ ಸಹಯೋಗದೊಂದಿಗೆ ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಸಲುವಾಗಿ ಕಟೀಲು ಶ್ರೀ ಗೋಪಾಲಕೃಷ್ಣ ಆಸ್ರಣ್ಣ ಸಭಾಂಗಣದಲ್ಲಿ ನಡೆದ ಪ್ರತಿಭಾ ಸೌರಭ ಉದ್ಘಾಟಿಸಿ ಮಾತನಾಡಿದರು.

ಪುನರೂರು ಪ್ರತಿಷ್ಠಾನ ಗೌರವ ಅಧ್ಯಕ್ಷ, ಕಸಾಪ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಅಧಕ್ಷತೆ ವಹಿಸಿದ್ದರು.

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಆನುವಂಶಿಕ ಅರ್ಚಕ ಗೋಪಾಲಕೃಷ್ಣ ಆಸ್ರಣ್ಣ ಶುಭ ಹಾರೈಸಿದರು.

ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ, ಕಿನ್ನಿಗೋಳಿ ಯುಗಪುರುಷ ಸಂಪಾದಕ, ಸಂಘಟಕ ಕೊಡೆತ್ತೂರು ಭುವನಾಭಿರಾಮ ಉಡುಪ, ಕರ್ಣಾಟಕ ಬ್ಯಾಂಕ್ ಕಟೀಲು ಶಾಖಾ ಪ್ರಬಂಧಕ ಮಿಥುನ್ ಆಚಾರ್ಯ, ಪುನರೂರು ಪ್ರತಿಷ್ಠಾನ ಗೌರವ ಅಧ್ಯಕ್ಷೆ ಎಚ್. ಕೆ. ಉಷಾರಾಣಿ, ಪ್ರಧಾನ ಕಾರ್ಯದರ್ಶಿ ಶ್ರೇಯಾ ಪುನರೂರು, ಜನ ವಿಕಾಸ ಸಮಿತಿ ಮೂಲ್ಕಿ ಅಧ್ಯಕ್ಷ ಪ್ರಾಣೇಶ್ ಭಟ್ ದೇಂದಡ್ಕ ಮೊದಲಾದವರಿದ್ದರು.

ಪುನರೂರು ಪ್ರತಿಷ್ಠಾನ ಅಧ್ಯಕ್ಷ ದೇವಪ್ರಸಾದ್ ಪುನರೂರು ಪ್ರಾಸ್ತಾವನೆಗೈದು, ಸ್ವಾಗತಿಸಿದರು. ಜನವಿಕಾಸ ಸಮಿತಿ ಮೂಲ್ಕಿ ಪ್ರಧಾನ ಕಾರ್ಯದರ್ಶಿ ದಾಮೋದರ ಶೆಟ್ಟಿ ಕೊಡೆತ್ತೂರು ವಂದಿಸಿದರು. ಜಿತೇಂದ್ರ ವಿ. ರಾವ್ ಹೆಜಮಾಡಿ ನಿರೂಪಿಸಿದರು.

ಮೂಲ್ಕಿ ಹೋಬಳಿಯ 25 ಪ್ರೌಢಶಾಲೆಯ 486 ಮಂದಿ ವಿದ್ಯಾರ್ಥಿಗಳು ಭಾಷಣ, ಪ್ರಬಂಧ, ಚಿತ್ರಕಲೆ ಹಾಗೂ ಕಸದಿಂದ ರಸ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!