Monday, July 4, 2022
Home ಸಮಾಚಾರ ರಾಷ್ಟ್ರೀಯ ವಾರ್ತೆ ಪ್ರಧಾನಿ ಭೇಟಿಯಾದ ಸಿಎಂ ಯಡಿಯೂರಪ್ಪ

ಪ್ರಧಾನಿ ಭೇಟಿಯಾದ ಸಿಎಂ ಯಡಿಯೂರಪ್ಪ

ನವದೆಹಲಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶುಕ್ರವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಕೆಲವು ಯೋಜನೆಗಳ ವಿಷಯದಲ್ಲಿ ಕೇಂದ್ರ ಸರ್ಕಾರದ ನೆರವು ಒದಗಿಸಲು ಮನವಿ ಮಾಡಿದರು.

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಬೇಕು, ಬೆಂಗಳೂರು ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣಕ್ಕೆ 6 ಸಾವಿರ ಕೋಟಿ ರೂ. ಅನುದಾನ ಒದಗಿಸಬೇಕು ಎಂದು ಸಿಎಂ, ಪ್ರಧಾನಿಗೆ ಮನವಿ ಮಾಡಿದರು.

ಮೇಕೆದಾಟು ಯೋಜನೆ, ಬೆಂಗಳೂರಿನಲ್ಲಿ ಯುಎಸ್ ಕಾನ್ಸುಲೇಟ್ ಸ್ಥಾಪನೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು.

ಪ್ರಧಾನಿ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಯಡಿಯೂರಪ್ಪ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದ್ದೇನೆ. ಪ್ರಧಾನಿ ಮೋದಿ ನಮ್ಮ ಬೇಡಿಕೆ ಈಡೇರಿಸುವುದಾಗಿ ಹೇಳಿದ್ದಾರೆ ಎಂದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!