Thursday, December 2, 2021
Home ಸಮಾಚಾರ ಜಿಲ್ಲಾ ಸುದ್ದಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮನೆಗೆ ಭೇಟಿ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮನೆಗೆ ಭೇಟಿ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮನೆಗೆ ಭೇಟಿ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ

ಉಡುಪಿ, ನ. 25 (ಸುದ್ದಿಕಿರಣ ವರದಿ): ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರಲಿದ್ದಾರೆ ಎಂಬ ಗಾಳಿ ಸುದ್ದಿ ಬೆನ್ನಲ್ಲೇ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಮತ್ತು ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿ ಮಂಜುನಾಥ ಭಂಡಾರಿ ಗುರುವಾರ ಪ್ರಮೋದ್ ಮಧ್ವರಾಜ್ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು.

ಪೇಜಾವರ ಶ್ರೀಪಾದರಿಗೆ ಪದ್ಮವಿಭೂಷಣ ಪ್ರಶಸ್ತಿ ಹಿನ್ನೆಲೆಯಲ್ಲಿ ಈಚೆಗೆ ನಡೆದ ಅಭಿನಂದನ ಕಾರ್ಯಕ್ರಮದಲ್ಲಿ ಪ್ರಮೋದ್, ಪ್ರಧಾನಿ ಮೋದಿಯವರನ್ನು ಹೊಗಳಿದ್ದಲ್ಲದೆ, ಕೇಂದ್ರ ಸರಕಾರ ಕೃಷಿ ಕಾನೂನುಗಳನ್ನು ವಾಪಾಸು ಪಡೆದಿದರುವ ವಿಚಾರದಲ್ಲಿಯೂ ಟ್ವೀಟ್ ಮಾಡುವ ಮೂಲಕ ಮೋದಿಯವರನ್ನು ಅಭಿನಂದಿಸಿದ್ದರು. ಬಳಿಕ ಟ್ವೀಟ್ ಮೂಲಕವೇ ತಮ್ಮ ಸ್ಪಷ್ಟನೆಯನ್ನೂ ನೀಡಿದ್ದರು. ಈನಡುವೆ ಸಾಮಾಜಿಕ ಜಾಲತಾಣದಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಪ್ರಮೋದ್ ಮಧ್ವರಾಜ್ ಬಿಜೆಪಿಗೆ ಸೇರಲಿದ್ದಾರೆ ಎಂಬ ಸುದ್ದಿ ವ್ಯಾಪಕವಾಗಿ ಹರಡಿತ್ತು.

ಈ ಎಲ್ಲದರ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಭೇಟಿ ಮಹತ್ವ ಪಡೆದಿದೆ.

ಈ ಕುರಿತು ಸುದ್ದಿಗಾರರು ಧ್ರುವನಾರಾಯಣ್ ಅವರನ್ನು ಪ್ರಶ್ನಿಸಿದಾಗ, ಬೆಂಗಳೂರಿನಲ್ಲಿ ನಡೆದ ಸದಸ್ಯತ್ವ ನೋಂದಣಿ ಸಭೆಯಲ್ಲಿ ಪ್ರಮೋದ್ ಭಾಗವಹಿಸಿದ್ದರು ಅಲ್ಲದೆ, ಹಾನಗಲ್ ವಿಧಾನಸಭಾ ಉಪಚುನಾವಣೆಯಲ್ಲಿ ಪ್ರಚಾರದ ನೇತೃತ್ವ ವಹಿಸಿ ಉಪಚುನಾವಣೆ ಕಾರ್ಯದಲ್ಲಿ 15 ದಿನ ಭಾಗವಹಿಸಿದ್ದರು. ಪಕ್ಷದೊಳಗೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಆದರೆ, ಇತ್ತೀಚಿನ ಬೆಳವಣಿಗೆಗಳ ಬಗ್ಗೆ ನನಗೆ ಗೊತ್ತಿಲ್ಲ. ಪ್ರಮೋದ್ ಜೊತೆ ಸಮಾಲೋಚನೆ ಮಾಡುತ್ತೇನೆ ಎಂದಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!