ಸುದ್ದಿಕಿರಣ ವರದಿ
ಗುರುವಾರ, ಆಗಸ್ಟ್ 4
ಪ್ರವೀಣ್ ಕೊಲೆಗಾರರು ಪತ್ತೆ: ಅಲೋಕ್ ಕುಮಾರ್
ಮಂಗಳೂರು: ಪ್ರವೀಣ್ ನೆಟ್ಟಾರು ಕೊಲೆಗಾರರು ಯಾರು ಎಂಬುದು ಗೊತ್ತಾಗಿದೆ. ಪ್ರಸ್ತುತ ಆರೋಪಿಗಳು ತಲೆಮರೆಸಿಕೊಂಡಿದ್ದು, ಶೀಘ್ರದಲ್ಲೇ ಅವರನ್ನು ಬಂಧಿಸುವುದಾಗಿ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.
ದ.ಕ. ಜಿಲ್ಲೆಯ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ನಡೆಯುತ್ತಿರುವ ತನಿಖೆ, ಬಂದೋಬಸ್ತ್ ಹಾಗೂ ಶಾಂತಿ ಸುವ್ಯವಸ್ಥೆ ಕುರಿತಂತೆ ಮಂಗಳೂರು ಕಮಿಷನರೇಟ್, ದ.ಕ. ಮತ್ತು ಉಡುಪಿ ಜಿಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಗುರುವಾರ ಸಭೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಈಗಾಗಲೇ ನಾಲ್ಕು ಜನರನ್ನು ಬಂಧಿಸಲಾಗಿದೆ. ಇನ್ನೂ ಕೆಲವರ ವಿಚಾರಣೆ ನಡೆಯುತ್ತಿದೆ. ಉಳಿದ ಆರೋಪಿಗಳನ್ನು ಪೊಲೀಸರು ಶೀಘ್ರದಲ್ಲೇ ಬಂಧಿಸಲಿದ್ದಾರೆ.
ಪ್ರವೀಣ್ ಹತ್ಯೆಗೆ ಪಿತೂರಿ ಯಾರು, ಎಲ್ಲಿ ಮಾಡಿರುವುದು ಎಂಬುದು ಗೊತ್ತಾಗಿದೆ. ಎನ್ಐಎ ಅಧಿಕಾರಿಗಳೊಂದಿಗೂ ಸಂಪರ್ಕದಲ್ಲಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದರು.