Saturday, August 13, 2022
Home ಸಮಾಚಾರ ಜಿಲ್ಲಾ ಸುದ್ದಿ ಪ್ರವೇಶ ನಿರಾಕರಣೆ ಸಹಿಸತಕ್ಕದ್ದಲ್ಲ

ಪ್ರವೇಶ ನಿರಾಕರಣೆ ಸಹಿಸತಕ್ಕದ್ದಲ್ಲ

ಪ್ರವೇಶ ನಿರಾಕರಣೆ ಸಹಿಸತಕ್ಕದ್ದಲ್ಲ

ಉಡುಪಿ: ಇಲ್ಲಿನ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಕಳೆದ ಮೂರು ದಿನಗಳಿಂದ ಹಿಜಾಬ್ ಧರಿಸಿ ಬರುತ್ತಿರುವ 6 ಮಂದಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸುತ್ತಿರುವುದು ಸಹಿಸತಕ್ಕದ್ದಲ್ಲ ಎಂದು ಸಾಮಾಜಿಕ ಕಾರ್ಯಕರ್ತ ಅನ್ಸಾರ್ ಅಹ್ಮದ್ ತಿಳಿಸಿದ್ದಾರೆ.

ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಶಿಕ್ಷಕ ಶಿಕ್ಷಕಿಯರೇ ಇಂಥ ವಿವಾದ ಸೃಷ್ಟಿಸಿ ಸಮಾಜದಲ್ಲಿ ಅಶಾಂತಿ ಉಂಟುಮಾಡುತ್ತಿರುವುದು ಖಂಡನೀಯ.

ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಪ್ರವೇಶ ನಿರಾಕರಣೆಯಂಥ ಘಟನೆ ನಾಳೆಯೂ ಮುಂದುವರಿದರೆ ಹೋರಾಟದ ಮೂಲಕ ತಕ್ಕ ಉತ್ತರ ನೀಡುವುದು ಅನಿವಾರ್ಯವಾಗುತ್ತದೆ ಎಂದು ಅನ್ಸಾರ್ ಎಚ್ಚರಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!