Monday, July 4, 2022
Home ಸಮಾಚಾರ ರಾಜ್ಯ ವಾರ್ತೆ ಜೂನ್ 16ರಿಂದ ಬಿಜೆಪಿ ರಾಷ್ಟ್ರೀಯ ಓಬಿಸಿ ಮೋರ್ಚಾ ಪ್ರಶಿಕ್ಷಣ ಕಾರ್ಯಾಗಾರ

ಜೂನ್ 16ರಿಂದ ಬಿಜೆಪಿ ರಾಷ್ಟ್ರೀಯ ಓಬಿಸಿ ಮೋರ್ಚಾ ಪ್ರಶಿಕ್ಷಣ ಕಾರ್ಯಾಗಾರ

ಸುದ್ದಿಕಿರಣ ವರದಿ
ಬುಧವಾರ, ಜೂನ್ 15

ಜೂ. 16ರಿಂದ ಬಿಜೆಪಿ ರಾಷ್ಟ್ರೀಯ ಓಬಿಸಿ ಮೋರ್ಚಾ ಪ್ರಶಿಕ್ಷಣ ಕಾರ್ಯಾಗಾರ
ಉಡುಪಿ: ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟೀಯ ಪ್ರಶಿಕ್ಷಣ ಕಾರ್ಯಾಗಾರ ಜೂನ್ 16ರಿಂದ 18ರ ವರೆಗೆ ಬೆಂಗಳೂರಿನ ಹೋಟೆಲ್ ರಮಡದಲ್ಲಿ ಆಯೋಜಿಸಲಾಗಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ತಿಳಿಸಿದ್ದಾರೆ.
ಕಾರ್ಯಾಗಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ.

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಡಾ. ಕೆ. ಲಕ್ಷ್ಮಣ ಅಧ್ಯಕ್ಷತೆ ವಹಿಸಲಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ. ಪಿ. ನಡ್ಡಾ, ರಾಷ್ಟೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಬಿಜೆಪಿ ಪ್ರಶಿಕ್ಷಣ ವಿಭಾಗದ ರಾಷ್ಟ್ರೀಯ ಪ್ರಭಾರಿ ಮುರಳೀಧರ ರಾವ್ ಹಾಗೂ ಪಕ್ಷದ ವಿವಿಧ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ.

ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟ್ರೀಯ ಪ್ರಶಿಕ್ಷಣ ಕಾರ್ಯಾಗಾರ ಬಗ್ಗೆ ಪೂರ್ವಭಾವಿ ಸಭೆ ನಡೆಸಿ ಕಾರ್ಯಕ್ರಮದ ಪೂರ್ವಸಿದ್ಧತೆಗಳ ಬಗ್ಗೆ ಚರ್ಚಿಸಲಾಗಿದ್ದು, ಸಭೆಯಲ್ಲಿ ಯಲಹಂಕ ವಿಧಾನಸಭಾ ಕ್ಷೇತ್ರ ಶಾಸಕ ಎಸ್. ಆರ್. ವಿಶ್ವನಾಥ್, ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಿಖಿಲ್ ಅನಂದ್, ರಾಷ್ಟ್ರೀಯ ಕಾರ್ಯಾಲಯ ಕಾರ್ಯದರ್ಶಿ ಸಂಜಯ್ ಗುಜ್ಜರ್, ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಾಧ್ಯಕ್ಷ ನೆ. ಲ. ನರೇಂದ್ರ ಬಾಬು, ಪ್ರಧಾನ ಕಾರ್ಯದರ್ಶಿ ಸುರೇಶ್ ಬಾಬು, ಮೋರ್ಚಾದ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು ಎಂದು ಯಶಪಾಲ್ ತಿಳಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!