ಉಡುಪಿ: ಪ್ಲಾಸ್ಟಿಕ್ ರಹಿತ ದಿನ ಅಂಗವಾಗಿ ಅಂಬಲಪಾಡಿ ಗ್ರಾಮ ಪಂಚಾಯತ್ ನಲ್ಲಿ ಶನಿವಾರ ಶಾಸಕ ಕೆ. ರಘುಪತಿ ಭಟ್ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸ್ಟಿಕ್ಕರ್ ಹಾಗೂ ಇಲಾಖೆಯ ವಿವಿಧ ಕೈಪಿಡಿ ಮತ್ತು ಪುಸ್ತಕಗಳನ್ನು ಬಿಡುಗಡೆ ಮಾಡಿದರು.
ಅಂಬಲಪಾಡಿ ಗ್ರಾ. ಪಂ. ಅಧ್ಯಕ್ಷೆ ರೋಹಿಣಿ, ಉಪಾಧ್ಯಕ್ಷ ಸೋಮನಾಥ್ ಬಿ.ಕೆ., ಉಡುಪಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮೋಹನ್ ರಾಜ್, ಕಾರ್ಮಿಕ ಇಲಾಖೆ ನಿರೀಕ್ಷಕ ಪ್ರವೀಣ್ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತಿ ಮೊದಲಾದವರಿದ್ದರು.