Monday, August 15, 2022
Home ಸಮಾಚಾರ ಜಿಲ್ಲಾ ಸುದ್ದಿ ಮಾ. 10ರಂದು ನಗರಸಭೆ ಬಜೆಟ್ ತಯಾರಿ ಸಭೆ

ಮಾ. 10ರಂದು ನಗರಸಭೆ ಬಜೆಟ್ ತಯಾರಿ ಸಭೆ

ಸುದ್ದಿಕಿರಣ ವರದಿ
ಸೋಮವಾರ, ಮಾರ್ಚ್ 7

ಮಾ. 10ರಂದು ನಗರಸಭೆ ಬಜೆಟ್ ತಯಾರಿ ಸಭೆ
ಉಡುಪಿ: ಸ್ಥಳೀಯ ನಗರಸಭೆಯ 2022- 23ನೇ ಸಾಲಿನ ಬಜೆಟ್ ತಯಾರಿ ಬಗ್ಗೆ ನಗರಸಭಾ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಆವಶ್ಯಕ ಅಭಿವೃದ್ಧಿ ಕೆಲಸ ಕಾರ್ಯಗಳ ವಿಚಾರ ವಿನಿಮಯ ಕುರಿತ ಪೂರ್ವಭಾವಿ ಸಾರ್ವಜನಿಕ ಸಮಾಲೋಚನ ಸಭೆ ಮಾ. 10ರಂದು ಅಪರಾಹ್ನ 3.30ಕ್ಕೆ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ನಡೆಯಲಿದೆ.

ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ.

ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ ನಗರಸಭೆಯ ಸರ್ವಾಂಗೀಣ ಅಭಿವೃದ್ಧಿಗೆ ಸಲಹೆ ಸೂಚನೆ ನೀಡುವಂತೆ ನಗರಸಭೆ ಪೌರಾಯುಕ್ತ ಡಾ. ಉದಯ ಶೆಟ್ಟಿ ಪ್ರಕಟಣೆ ತಿಳಿಸಿದೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!