Saturday, July 2, 2022
Home ಸಮಾಚಾರ ಜಿಲ್ಲಾ ಸುದ್ದಿ ಬಾಕಿ ತೆರಿಗೆ ಪಾವತಿಸಿ ವಾಹನ ಚಲಾಯಿಸಿ

ಬಾಕಿ ತೆರಿಗೆ ಪಾವತಿಸಿ ವಾಹನ ಚಲಾಯಿಸಿ

ಉಡುಪಿ: ಕೊರೊನಾ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಯಾಣಿಕ ವಾಹನಗಳಾದ ಬಸ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳು ವಾಹನದ ಮೂಲ ದಾಖಲಾತಿಗಳೊಂದಿಗೆ ಕಚೇರಿಗೆ ಸರೆಂಡರ್ ಮಾಡಿದ್ದಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿಗೆ ಅರ್ಜಿ ಸಲ್ಲಿಸಿ ಬಳಿಕವೇ ವಾಹನ ಉಪಯೋಗಿಸಲು ಸಾಧ್ಯ ಎಂದು ಆರ್.ಟಿ.ಓ ಜೆ. ಪಿ. ಗಂಗಾಧರ್ ತಿಳಿಸಿದ್ದಾರೆ.

ಅಂಥ ವಾಹನಗಳು ಜೂ. 30ರೊಳಗೆ ವಾಹನದ ಬಾಕಿ ತೆರಿಗೆ ಪಾವತಿಸದೆ ಅಥವಾ ವಿನಾಯಿತಿ ಪಡೆಯದೇ ಪೂರ್ವಾನುಮತಿ ಇಲ್ಲದೆ ವಾಹನ ಚಲಾಯಿಸುವಂತಿಲ್ಲ. ಒಂದು ವೇಳೆ ಚಲಾಯಿಸಿದಲ್ಲಿ ಕಚೇರಿಯ ವಿಶೇಷ ತಪಾಸಣೆ ಸಂದರ್ಭ ಸಿಕ್ಕಿಬಿದ್ದಲ್ಲಿ ಭಾರೀ ದಂಡದೊಂದಿಗೆ ಉಳಿಕೆ ತೆರಿಗೆ ಕಟ್ಟಬೇಕಾಗುವುದು ಎಂದವರು ಎಚ್ಚರಿಸಿದ್ದಾರೆ.

ಬಸ್ಸಿನಲ್ಲಿ ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಹಾಗೂ ಚಾಲಕ ಮತ್ತು ನಿರ್ವಾಹಕರು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದಿರಬೇಕು ಎಂದು ಆರ್.ಟಿ.ಓ. ಗಂಗಾಧರ್ ತಿಳಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!