Thursday, July 7, 2022
Home ಸಮಾಚಾರ ತೆಲಂಗಾಣ ರಾಜ್ಯಪಾಲರಾಗಿ ಯಡಿಯೂರಪ್ಪ?

ತೆಲಂಗಾಣ ರಾಜ್ಯಪಾಲರಾಗಿ ಯಡಿಯೂರಪ್ಪ?

ತೆಲಂಗಾಣ ರಾಜ್ಯಪಾಲರಾಗಿ ಯಡಿಯೂರಪ್ಪ?

(ಸುದ್ದಿಕಿರಣ ವರದಿ)
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಶೀಘ್ರದಲ್ಲಿ ತೆಲಂಗಾಣ ರಾಜ್ಯಪಾಲರನ್ನಾಗಿ ನೇಮಿಸಲಾಗುವುದು ಎಂಬ ದಟ್ಟ ವದಂತಿ ಹಬ್ಬಿದೆ.

ಪ್ರಸಕ್ತ ರಾಜ್ಯಪಾಲೆಯಾಗಿರುವ ತಮಿಳೈ ಸೌಂದರ್ಯ ರಾಜನ್ ಅವರನ್ನು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ತೆರವುಗೊಂಡಿರುವ ಸ್ಥಾನಕ್ಕೆ ಬಿಎಸ್.ವೈ ನೇಮಕ ಸಾಧ್ಯತೆ ಇದೆ ಎನ್ನಲಾಗಿದೆ.

ಹೈಕಮಾಂಡ್ ಮೂಲಗಳ ಪ್ರಕಾರ, ಯಡಿಯೂರಪ್ಪ ಮಾಲ್ಡೀವ್ಸ್ ಪ್ರವಾಸದಿಂದ ಹಿಂದಿರುಗಿದ ತಕ್ಷಣ ಕೇಂದ್ರ ಸರ್ಕಾರ ಅವರನ್ನು ರಾಜ್ಯಪಾಲರನ್ನಾಗಿ ನೇಮಿಸುವ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!