Monday, August 15, 2022
Home ಸಮಾಚಾರ ಜಿಲ್ಲಾ ಸುದ್ದಿ ಕಾಪು ಪುರಸಭೆ ಚುನಾವಣೆ: ಬಿಜೆಪಿಯ ಐತಿಹಾಸಿಕ ಗೆಲುವು

ಕಾಪು ಪುರಸಭೆ ಚುನಾವಣೆ: ಬಿಜೆಪಿಯ ಐತಿಹಾಸಿಕ ಗೆಲುವು

ಕಾಪು ಪುರಸಭೆ ಚುನಾವಣೆ: ಬಿಜೆಪಿಯ ಐತಿಹಾಸಿಕ ಗೆಲುವು

ಕಾಪು: ಸ್ಥಳೀಯ ಪುರಸಭೆ ಚುನಾವಣೆಯ 23 ಸ್ಥಾನಗಳ ಪೈಕಿ 12 ಮಂದಿ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಸ್ಪಷ್ಟ ಬಹುಮತ ಗಳಿಸಿರುವ ಬಿಜೆಪಿ ಗೆಲುವು ಐತಿಹಾಸಿಕ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹರ್ಷ ವ್ಯಕ್ತ ಪಡಿಸಿದ್ದಾರೆ.

ಬಿಜೆಪಿಗೆ ಬಹುಮತ ನೀಡಿದ ಕಾಪು ಪುರಸಭಾ ವ್ಯಾಪ್ತಿಯ ಮತದಾರರಿಗೆ ಹೃತ್ಪೂರ್ವಕ ವಂದನೆ ಸಲ್ಲಿಸುವ ಜೊತೆಗೆ ಚುನಾವಣಾ ಗೆಲುವಿಗೆ ಹಗಲಿರುಳು ಶ್ರಮಿಸಿರುವ ಸಚಿವರು, ಸಂಸದರು, ಶಾಸಕರು, ಪಕ್ಷದ ಮುಖಂಡರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರಿಗೆ ಅಭಿನಂದಿಸುವುದಾಗಿ ತಿಳಿಸಿದ್ದಾರೆ.

ನವ ಕಾಪು ನಿರ್ಮಾಣ
ಕಾಪುವನ್ನು ಮಾದರಿ ಪುರಸಭೆಯನ್ನಾಗಿ ರೂಪಿಸುವ ನಿಟ್ಟಿನಲ್ಲಿ ಕುಡಿಯುವ ನೀರು, ಒಳಚರಂಡಿ, ತ್ಯಾಜ್ಯ ನಿರ್ವಹಣೆ, ದಾರಿದೀಪ, ಮೀನು ಮಾರುಕಟ್ಟೆ ಮುಂತಾದ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ವಿಶೇಷ ಒತ್ತುನೀಡಿ ಮುಂದಿನ 5 ವರ್ಷದಲ್ಲಿ ನವ ಕಾಪು ನಿರ್ಮಾಣದ ಸಂಕಲ್ಪದೊಂದಿಗೆ ಅತ್ಯಂತ ಉತ್ತಮ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಕುಯಿಲಾಡಿ ತಿಳಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!