Monday, August 15, 2022
Home ಸಮಾಚಾರ ಅಪರಾಧ ಬಿಜೆಪಿ ಕಾರ್ಯಕರ್ತನ ಕಗ್ಗೊಲೆ

ಬಿಜೆಪಿ ಕಾರ್ಯಕರ್ತನ ಕಗ್ಗೊಲೆ

ಸುದ್ದಿಕಿರಣ ವರದಿ
ಮಂಗಳವಾರ, ಜುಲೈ 26

ಬಿಜೆಪಿ ಕಾರ್ಯಕರ್ತನ ಕಗ್ಗೊಲೆ
ಸುಳ್ಯ:  ಇಲ್ಲಿನ ಬೆಳ್ಳಾರೆ ಸಮೀಪ ಬಿಜೆಪಿ ಯುವ ನಾಯಕ ಹಾಗೂ ಚಿಕನ್ ಅಂಗಡಿ ಮಾಲೀಕನ ಮೇಲೆ ದುಷ್ಕರ್ಮಿಗಳ ತಂಡವೊಂದು ತಲವಾರಿನಿಂದ ದಾಳಿ ನಡೆಸಿ, ಪರಾರಿಯಾದ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ.

ರಕ್ತದ ಮಡುವಿನಲ್ಲಿ ಬಿದ್ದ ಯುವಕ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.

ಮೃತರಾದವರನ್ನು ಪ್ರವೀಣ್ ನೆಟ್ಟಾರು (32) ಎಂದು ಗುರುತಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರವೀಣ್ ಸಾವಿಗೆ ಖೇದ ವ್ಯಕ್ತಪಡಿಸಿ ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. ಕೊಲೆ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.

ಈಚೆಗೆ ನಡೆದ ಮುಸ್ಲಿಂ ಯುವಕನೋರ್ವನ ಸಾವಿಗೆ ಪ್ರತೀಕಾರವಾಗಿ ಪ್ರವೀಣ್ ಹತ್ಯೆಯಾಗಿದೆ ಎನ್ನಲಾಗಿದೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!