Saturday, August 13, 2022
Home ಸಮಾಚಾರ ಜಿಲ್ಲಾ ಸುದ್ದಿ ಬಿಜೆಪಿ ಕಾರ್ಯಕರ್ತರಿಗಾಗಿ ಸಿನೆಮಾ

ಬಿಜೆಪಿ ಕಾರ್ಯಕರ್ತರಿಗಾಗಿ ಸಿನೆಮಾ

ಸುದ್ದಿಕಿರಣ ವರದಿ
ಭಾನುವಾರ, ಮಾರ್ಚ್ 20

ಬಿಜೆಪಿ ಕಾರ್ಯಕರ್ತರಿಗಾಗಿ ಸಿನೆಮಾ
ಮಣಿಪಾಲ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ಮತ್ತು ನಗರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮತ್ತು ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ನೇತೃತ್ವದಲ್ಲಿ ದಿ ಕಾಶ್ಮೀರ್ ಫೈಲ್ಸ್ ಚಲನಚಿತ್ರ ಪ್ರದರ್ಶನವನ್ನು ಪಕ್ಷದ ಕಾರ್ಯಕರ್ತರಿಗಾಗಿ ಇಲ್ಲಿನ ಕೆನರಾ ಮಾಲ್ ನಲ್ಲಿ ಆಯೋಜಿಸಲಾಯಿತು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು.

ಶಾಸಕ ಕೆ. ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ರಾಜ್ಯ, ಜಿಲ್ಲೆ ಮತ್ತು ನಗರ ಬಿಜೆಪಿ ಪ್ರಮುಖರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!