ಸುದ್ದಿಕಿರಣ ವರದಿ
ಶುಕ್ರವಾರ, ಜುಲೈ 15
ಬಿಜೆಪಿ ಚಿಂತನ ಸಭೆ
ಬೆಂಗಳೂರು: ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಸಂಘಟನೆ, ಪ್ರಸಕ್ತ ರಾಜಕೀಯ ಸ್ಥಿತಿ ಇತ್ಯಾದಿ ವಿಚಾರಗಳ ಕುರಿತು ಬಿಜೆಪಿ ಆಯೋಜಿಸಿರುವ ಚಿಂತನ ಸಭೆ ಶುಕ್ರವಾರ ಆರಂಭಗೊಂಡಿತು.
ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ಮತ್ತು ಡಿ. ವಿ. ಸದಾನಂದ ಗೌಡ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ಇತರ ಪ್ರಮುಖ ನಾಯಕರು ಹಾಗೂ ಸಚಿವರು ಉಪಸ್ಥಿತರಿದ್ದರು.