Saturday, August 13, 2022
Home ಸಮಾಚಾರ ರಾಜ್ಯ ವಾರ್ತೆ ಬಿಜೆಪಿ ಜನೋತ್ಸವ ರದ್ದು

ಬಿಜೆಪಿ ಜನೋತ್ಸವ ರದ್ದು

ಸುದ್ದಿಕಿರಣ ವರದಿ
ಗುರುವಾರ, ಜುಲೈ 28

ಬಿಜೆಪಿ ಜನೋತ್ಸವ ರದ್ದು
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ಹತ್ಯೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಆಯೋಜಿಸಲಾಗಿದ್ದ ಜನೋತ್ಸವ ಸಮಾವೇಶವನ್ನು ರದ್ದುಪಡಿಸಿದ್ದಾರೆ.

ಬುಧವಾರ ರಾತ್ರಿ 12.30ರ ವೇಳೆ ಆರ್.ಟಿ. ನಗರದ ತಮ್ಮ ನಿವಾಸದಲ್ಲಿ ತುರ್ತಾಗಿ ಕರೆದ ಪತ್ರಿಕಾಗೋಷ್ಟಿಯಲ್ಲಿ ಈ ವಿಷಯ ಪ್ರಕಟಿಸಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾದ ಬಿಜೆಪಿ ಜನೋತ್ಸವ ಮತ್ತು ವಿಧಾನಸೌಧದಲ್ಲಿ ನಡೆಸಲುದ್ದೇ ಶಿಸಿರುವ ಸರ್ಕಾರಿ ಕಾರ್ಯಕ್ರಮವನ್ನು ರದ್ದು ಮಾಡಿರುವುದಾಗಿ ಸಿಎಂ ತಿಳಿಸಿದ್ದಾರೆ.

ಆದರೆ, ಪರಿಶಿಷ್ಟ ಜಾತಿ ಮತ್ತು ಪಂಗಡದ ಕಲ್ಯಾಣಕ್ಕೆ ಸಂಬಂಧಿ ಸಿದ ಕೆಲವೊಂದು ಕಾರ್ಯಕ್ರಮ ಗುರುವಾರ ಬೆಳಗ್ಗೆ 10 ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸುವುದಾಗಿ ಅವರು ತಿಳಿಸಿದ್ದಾರೆ.

ಪ್ರವೀಣ್ ಕುಟುಂಬದ ಆಕ್ರಂದನ ಕಂಡು ನನ್ನ ಮನಸ್ಸಿಗೆ ಬೇಸರವಾಗಿದೆ. ಹಾಗಾಗಿ ನನ್ನ ಮನಃಸಾಕ್ಷಿಗನುಗುಣವಾಗಿ ಈ ಸಮಾವೇಶ ರದ್ದುಪಡಿಸಿರುವುದಾಗಿ ಸಿಎಂ ಬೊಮ್ಮಾಯಿ ಸ್ಪಷ್ಟಪಡಿಸಿದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!