Wednesday, July 6, 2022
Home ಸಮಾಚಾರ ಜಿಲ್ಲಾ ಸುದ್ದಿ ಮೇ 15: ಬಿಜೆಪಿ ಉಡುಪಿ ಜಿಲ್ಲಾ ಪ್ರಕೋಷ್ಠ ಸಮಾವೇಶ

ಮೇ 15: ಬಿಜೆಪಿ ಉಡುಪಿ ಜಿಲ್ಲಾ ಪ್ರಕೋಷ್ಠ ಸಮಾವೇಶ

ಸುದ್ದಿಕಿರಣ ವರದಿ
ಶನಿವಾರ, ಮೇ 14

ಮೇ 15: ಬಿಜೆಪಿ ಉಡುಪಿ ಜಿಲ್ಲಾ ಪ್ರಕೋಷ್ಠ ಸಮಾವೇಶ
ಉಡುಪಿ: ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶ ಮೇ 15ರಂದು ಇಲ್ಲಿನ ಹೋಟೆಲ್ ಶಾರದಾ ಇಂಟರ್ ನ್ಯಾಷನಲ್ ಸಭಾಂಗಣದಲ್ಲಿ ನಡೆಯಲಿದೆ.

ಸಮಾವೇಶವನ್ನು ಅಪರಾಹ್ನ 2.30ಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸುವರು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆ ವಹಿಸುವರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಉಡುಪಿ ಶಾಸಕ ಕೆ. ರಘುಪತಿ ಭಟ್, ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ವಿಜಯ ಕುಮಾರ್ ಉದ್ಯಾವರ ಮತ್ತು ಜಗದೀಶ್ ಆಚಾರ್ಯ ಕಪ್ಪೆಟ್ಟು ಉಪಸ್ಥಿತರಿರುವರು.

ಅಪರಾಹ್ನ 3.15ಕ್ಕೆ ಪಕ್ಷ ಸಂಘಟನೆಯಲ್ಲಿ ಪ್ರಕೋಷ್ಠಗಳ ಪಾತ್ರ ವಿಷಯದ ಬಗ್ಗೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮಾತನಾಡುವರು.

ಸಂಜೆ 4ಕ್ಕೆ 2014ರ ನಂತರ ಭಾರತದ ವಿಕಾಸ ವಿಷಯ ಬಗ್ಗೆ ರಾಜ್ಯ ಕೈಗಾರಿಕಾ ಪ್ರಕೋಷ್ಠ ಸಹ ಸಂಚಾಲಕ ಗುಂಜೂರು ಚರಣ್ ಮಾತನಾಡುವರು.

ಸಂಜೆ 4.45ಕ್ಕೆ ಸಚಿವ ವಿ. ಸುನಿಲ್ ಕುಮಾರ್ ಸಮಾರೋಪ ಭಾಷಣ ಮಾಡುವರು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆ ವಹಿಸುವರು.

ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಉಪಸ್ಥಿತರಿರುವರು ಎಂದು ಬಿಜೆಪಿ ಕರ್ನಾಟಕ ರಾಜ್ಯ ಕೈಗಾರಿಕಾ ಪ್ರಕೋಷ್ಠ ಸಂಚಾಲಕ ಪ್ರದೀಪ್ ಜಿ. ಪೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!