Wednesday, July 6, 2022
Home ಸಮಾಚಾರ ಜಿಲ್ಲಾ ಸುದ್ದಿ ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ

ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ

ಸುದ್ದಿಕಿರಣ ವರದಿ
ಭಾನುವಾರ, ಮೇ 8

ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ
ಉಡುಪಿ: ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು.

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡ ಜಲಸಾರಿಗೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಿದರು.

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಹಾಗೂ ಉ.ಕ. ಜಿಲ್ಲಾ ಉಸ್ತುವಾರಿ ಮಂತ್ರಿ ಕೋಟ ಶ್ರೀನಿವಾಸ ಪೂಜಾರಿ ಪ್ರಶ್ನೋತ್ತರ ಅವಧಿಯಲ್ಲಿ ಭಾಗವಹಿಸಿ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳ ಪ್ರಶ್ನೆಗಳನ್ನು ವಿಶ್ಲೇಷಿಸಿ ಸೂಕ್ತ ಮಾರ್ಗೋಪಾಯಗಳನ್ನು ತಿಳಿಸಿದರು.

ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಮಂಗಳೂರು ಮತ್ತು ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ ಪಕ್ಷದ ಸಂಘಟನಾತ್ಮಕ ವಿಚಾರಗಳು ಮತ್ತು ಪಕ್ಷದ ಮುಂದಿನ ಕಾರ್ಯಚಟುವಟಿಕೆ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಸುದೀರ್ಘ ಅವಧಿಯ ಬೇಡಿಕೆಯಾಗಿದ್ದ ಡೀಮ್ಡ್ ಫಾರೆಸ್ಟ್ ಸಮಸ್ಯೆಗೆ ಸೂಕ್ತ ಪರಿಹಾರ ಕಲ್ಪಿಸಿರುವ ಅರಣ್ಯ ಸಚಿವ ಉಮೇಶ್ ಕತ್ತಿ ಅವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಸನ್ಮಾನಿಸಲಾಯಿತು.

ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಮಾರೋಪದಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಬಿಜೆಪಿ ಪ್ರಭಾರಿ ಹಾಗೂ ಮೂಲ್ಕಿ- ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಚುನಾವಣೆ ಸಮೀಪಿಸುತ್ತಿರುವ ಈ ಕಾಲಘಟ್ಟದಲ್ಲಿ ಪಕ್ಷ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಸಮಿತಿ ಸದಸ್ಯರು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪ್ರಯತ್ನದ ಮೂಲಕ ಮಗದೊಮ್ಮೆ ಜಿ. ಪಂ. ಮತ್ತು ತಾ. ಪಂ. ಚುನಾವಣೆಗಳಲ್ಲಿ ವಿಕ್ರಮ ಸಾಧನೆ ತೋರುವ ಜೊತೆಗೆ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲುವ ಪಣದೊಂದಿಗೆ ಸದೃಢ ಪಕ್ಷ ಸಂಘಟನೆಯಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಶಾಸಕರಾದ ಕೆ. ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್ ಮತ್ತು ಬಿ. ಎಂ. ಸುಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ, ಬಿಜೆಪಿ ರಾಷ್ಟ್ರೀಯ ಮತ್ತು ರಾಜ್ಯ ಪದಾಧಿಕಾರಿಗಳು, ವಿಶೇಷ ಆಹ್ವಾನಿತರು, ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಕಾರ್ಯಕಾರಿಣಿ ಸದಸ್ಯರು, ಜಿಲ್ಲಾ ಮೋರ್ಚಾ ಮತ್ತು ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು, ಸಂಚಾಲಕರು, ಸಹ ಸಂಚಾಲಕರು ಇದ್ದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಸ್ವಾಗತಿಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ ಶೆಟ್ಟಿ ನಿರೂಪಿಸಿದರು. ಸದಾನಂದ ಉಪ್ಪಿನಕುದ್ರು ವಂದಿಸಿದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!