Sunday, July 3, 2022
Home ಸಮಾಚಾರ ಜಿಲ್ಲಾ ಸುದ್ದಿ ಬಿಜೆಪಿ ಸಂಸ್ಥಾಪಕರ ದಿನಾಚರಣೆ

ಬಿಜೆಪಿ ಸಂಸ್ಥಾಪಕರ ದಿನಾಚರಣೆ

ಉಡುಪಿ: ಜನಸಂಘ ಸಂಸ್ಥಾಪಕರಾದ ಶ್ಯಾಮಪ್ರಸಾದ ಮುಖರ್ಜಿ ಹಾಗೂ ಪಂ. ದೀನದಯಾಳ್ ಉಪಾಧ್ಯಾಯ ರಾಜಕೀಯ ಕಾರ್ಯಕರ್ತರಿಗೆ ಎಂದಿಗೂ ಪ್ರೇರಣೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್ ಹೇಳಿದರು.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಬಿ.ಜೆ.ಪಿ. ಸಂಸ್ಥಾಪನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಷ್ಟ್ರೀಯತೆ, ಧರ್ಮ, ಇತಿಹಾಸ ಹಾಗೂ ಸಂಸ್ಕೃತಿ ಕಾಪಾಡಿಕೊಂಡು ಬಂದಿರುವ ನೆಲೆಯಲ್ಲಿ ದೇಶ ಮೊದಲು ಎಂಬ ಧ್ಯೇಯದೊಂದಿಗೆ ಸಂಘಟನೆ ಬೆಳೆಸಿದ ರೀತಿ ಭಾರತೀಯ ರಾಜಕಾರಣದ ಇತಿಹಾಸದ ಮೈಲಿಗಲ್ಲು. ವೈಚಾರಿಕತೆಯ ಆಧಾರದ ರಾಜಕೀಯ ಸಂಘಟನೆಯೊಂದನ್ನು ಕಟ್ಟಿದ ಕೀರ್ತಿ ಡಾ| ಶ್ಯಾಮಪ್ರಸಾದ್ ಮುಖರ್ಜಿ ಮತ್ತು ಪಂಡಿತ್ ದೀನದಯಾಳ್ ಉಪಾಧ್ಯಾಯರಿಗೆ ಸಲ್ಲುತ್ತದೆ ಎಂದರು.

ಜಿಲ್ಲಾ ಉಪಾಧ್ಯಕ್ಷ ಬಿ. ರವಿ ಅಮೀನ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕರಾದ ಚಂದ್ರಶೇಖರ ಪ್ರಭು, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಂಜುನಾಥ ಮಣಿಪಾಲ, ವಿನೋದಾ ನಾಯಕ್ ಮೊದಲಾದವರಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!