Monday, July 4, 2022
Home ಸಮಾಚಾರ ರಾಷ್ಟ್ರೀಯ ವಾರ್ತೆ ಭಾರತೀಯ ವಾಸ್ತುಶೈಲಿಯಲ್ಲಿ ಮಂದಿರ ನಿರ್ಮಾಣ

ಭಾರತೀಯ ವಾಸ್ತುಶೈಲಿಯಲ್ಲಿ ಮಂದಿರ ನಿರ್ಮಾಣ

ಉಡುಪಿ: ಸುಮಾರು 1,400 ಕೋ. ರೂ. ವೆಚ್ಚದಲ್ಲಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಶ್ರೀರಾಮ ಮಂದಿರವನ್ನು ಭಾರತೀಯ ವಾಸ್ತುಶೈಲಿಯಲ್ಲಿ ನಿರ್ಮಿಸಲಾಗುವುದು. ಅದಕ್ಕಾಗಿ ಮೂಲತಃ ಉಡುಪಿ ಸಮೀಪದ ಪಡುಬಿದ್ರಿಯವರಾದ, ಪ್ರಸ್ತುತ ಕೇರಳದ ಕೊಚ್ಚಿ ನಿವಾಸಿ ಜಯಗೋಪಾಲ್ ಅವರನ್ನು ಸಂಪರ್ಕಿಸಲಾಗಿದೆ ಎಂದು ಅಯೋಧ್ಯೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವಿಶ್ವಸ್ಥರೂ ಆಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟ್ರಸ್ಟ್ ಕೋಶಾಧಿಕಾರಿ ಗೋವಿಂದ ದೇವಗಿರಿ ಈಗಾಗಲೇ ಜಯಗೋಪಾಲ್ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ತಾವು ಉಡುಪಿ ಗುಂಡಿಬೈಲು ಸುಬ್ರಹ್ಮಣ್ಯ ಭಟ್ ಹಾಗೂ ದ.ಕ. ಜಿಲ್ಲೆಯ ಕುಡುಪು ಕೃಷ್ಣರಾಜ ತಂತ್ರಿ ಅವರ ಹೆಸರನ್ನು ಸೂಚಿಸಿರುವುದಾಗಿ ತಿಳಿಸಿದರು.
ಅಯೋಧ್ಯೆಯಲಿ ಟ್ರಸ್ಟ್ ಗೆ ಹಸ್ತಾಂತರವಾಗಿರುವ 70 ಎಕ್ರೆ ಜಾಗವನ್ನು ಶ್ರೀರಾಮ ಮಂದಿರ ನಿರ್ಮಾಣದ ಜೊತೆಗೆ ಭಾರತೀಯ ಸಂಸ್ಕೃತಿಯ ಪುನರುತ್ಥಾನ ಕೇಂದ್ರವನ್ನಾಗಿ ಮಾರ್ಪಡಿಸಲಾಗುವುದು. ಅದಕ್ಕಾಗಿ ನಿಧಿ ಸಂಗ್ರಹದ ಜವಾಬ್ದಾರಿಯನ್ನು ವಿಶ್ವ ಹಿಂದೂ ಪರಿಷತ್ ಗೆ ವಹಿಸಿಕೊಡಲಾಗಿದೆ ಎಂದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!