Wednesday, July 6, 2022
Home ಸಮಾಚಾರ ಜಿಲ್ಲಾ ಸುದ್ದಿ ಮಕ್ಕಳು ಮತ್ತು ಮಹಿಳೆಯರ ಅಭಿವೃದ್ಧಿಗೆ ಶ್ರಮಿಸಿ

ಮಕ್ಕಳು ಮತ್ತು ಮಹಿಳೆಯರ ಅಭಿವೃದ್ಧಿಗೆ ಶ್ರಮಿಸಿ

ಉಡುಪಿ: ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿಗೆ ಗ್ರಾಮ ಮಟ್ಟದಿಂದ ರಾಷ್ಟ್ರ ಮಟ್ಟದ ವರೆಗೆ ಜೊತೆಯಾಗಿ ಶ್ರಮಿಸಿ.
ಇದು ರಾಷ್ಟ್ರೀಯ ಮಹಿಳಾ ಆಯೋಗ ಸದಸ್ಯೆ ಶ್ಯಾಮಲಾ ಕುಂದರ್ ನೀಡಿದ ಕರೆ.
ಜಿಲ್ಲಾ ಬಾಲಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಉಡುಪಿ ಸಂಯುಕ್ತಾಶ್ರಯದಲ್ಲಿ ಈಚೆಗೆ ಬ್ರಹ್ಮಗಿರಿ ಜಿಲ್ಲಾ ಬಾಲಭವನದಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ನಗರಸಭಾಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಮಕ್ಕಳ ಬೆಳವಣಿಗೆಯಲ್ಲಿ ತಾಯಂದಿರ ಪಾತ್ರ ಅತೀ ಮುಖ್ಯ. ಮಕ್ಕಳಿಗೆ ಮನೆಯೇ ಮೊದಲ ಪಾಠ ಶಾಲೆ, ತಾಯಿಯೇ ಮೊದಲ ಗುರು ಎಂದರು.
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರೊನಾಲ್ಡ್ ಫುರ್ಟಾಡೊ, ಮಕ್ಕಳ ಕಲ್ಯಾಣ ಸಮಿತಿಯಿಂದ ಮಕ್ಕಳ ರಕ್ಷಣೆ ಹಾಗೂ ಪೋಷಣೆಗೆ ಕೈಗೊಳ್ಳುತ್ತಿರುವ ಕ್ರಮಗಳ ಬಗ್ಗೆ ತಿಳಿಸಿದರು.
ನಗರಸಭಾ ಸದಸ್ಯೆ ರಶ್ಮಿ ಭಟ್ ಇದ್ದರು.
ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಿವೇಕಾನಂದ ಸ್ವಾಗತಿಸಿದರು. ಮೇಲ್ವಿಚಾರಕಿ ಸಂಗೀತಾ ಎಂ. ಕೆ. ನಿರೂಪಿಸಿದರು. ಬಾಲಭವನ ಸಂಯೋಜಕಿ ರಮ್ಯಾ ವಂದಿಸಿದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!