Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ಎಸ್.ಎಸ್.ಎಲ್.ಸಿ. ಮಕ್ಕಳ ಮನೆಗೆ ಜಿಲ್ಲಾಧಿಕಾರಿ ಭೇಟಿ

ಎಸ್.ಎಸ್.ಎಲ್.ಸಿ. ಮಕ್ಕಳ ಮನೆಗೆ ಜಿಲ್ಲಾಧಿಕಾರಿ ಭೇಟಿ

ಹೆಬ್ರಿ: ಈಚೆಗೆ ಕಬ್ಬಿನಾಲೆಯಲ್ಲಿ ನಡೆದ ಗ್ರಾಮ ವಾಸ್ತವ್ಯ ಸಂದರ್ಭ ಸೋಮೇಶ್ವರ ಶಾಲೆಯಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದು, ಸಂಜೆ ವೇಳೆಗೆ ಇಲ್ಲಿನ ಸರ್ಕಾರಿ ಪ್ರೌಢಶಾಲೆ ವ್ಯಾಪ್ತಿಯ ಸೋಮೇಶ್ವರ ಗ್ರಾಮದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಮನೆಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ ಭೇಟಿ ನೀಡಿದರು.

ಮಕ್ಕಳು ಮನೆಯಲ್ಲಿ ಅಭ್ಯಾಸ ಮಾಡುತ್ತಿರುವ ಬಗ್ಗೆ ಪರಿಶೀಲಿಸಿದರು. ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದ ಜಿಲ್ಲಾಧಿಕಾರಿ ಅಂಕ ಗಳಿಕೆ ಗುರಿ, ಮುಂದಿನ ಗುರಿ, ಕಷ್ಟಕರ ಕಲಿಕೆ ವಿಷಯ ಇತ್ಯಾದಿಗಳ ಬಗ್ಗೆ ವಿಚಾರಿಸಿದರು.

ಪಾಲಕರೊಂದಿಗೆ ಮಾತುಕತೆ ನಡೆಸಿದ ಜಿಲ್ಲಾಧಿಕಾರಿ, ಮಕ್ಕಳಿಗೆ ಕಲಿಕೆಗೆ ಪೂರಕ ವಾತಾವರಣ ಕಲ್ಪಿಸಲು ಸೂಚಿಸಿದರು. ಒತ್ತಡ ರಹಿತ ಕಲಿಕೆಗೆ ಪ್ರೋತ್ಸಾಹ ನೀಡಲು ತಿಳಿಸಿದರು. ಈ ಬಾರಿ ಉತ್ತಮ ಫಲಿತಾಂಶ ತರುವಲ್ಲಿ ಪ್ರತಿಯೊಬ್ಬರೂ ಶ್ರಮಿಸಬೇಕೆಂದು ವಿನಂತಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಸಹಾಯಕ ಆಯುಕ್ತ ರಾಜು, ಡಿಡಿಪಿಐ ಎನ್. ಎಚ್. ನಾಗೂರ, ಕಾರ್ಕಳ ಬಿಇಓ ಶಶಿಧರ ಜಿ. ಎಸ್., ಹೆಬ್ರಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ದಿವಾಕರ ಮೊದಲಾದವರಿದ್ದರು.

ಶಿಕ್ಷಣಕ್ಕೆ ನೆರವಿನ ಭರವಸೆ
ವಿದ್ಯಾರ್ಥಿನಿಯೋರ್ವಳ ಮನೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಆ ಮನೆಯಲ್ಲಿ ನಡೆದ ಘಟನೆ ಡಿಸಿ ಮನ ಕಲಕಿತು. ಒಂದು ವಾರ ಅಂತರದಲ್ಲಿ ಆ ವಿದ್ಯಾರ್ಥಿನಿಯ ತಂದೆ, ತಾಯಿ ಮತ್ತು ಅಜ್ಜಿ ಅಸುನೀಗಿದ್ದರು. ವಿದ್ಯಾರ್ಥಿನಿ ಮಾನಸಿಕವಾಗಿ ನೊಂದಿದ್ದಳು.

ಆಕೆಯ ಸ್ಥಿತಿ ಕಂಡ ಡಿಸಿ ಜಗದೀಶ ಸಾಂತ್ವನ ನೀಡಿ ಆಕೆಯ ಶಿಕ್ಷಣಕ್ಕೆ ನೆರವು ನೀಡುವ ಭರವಸೆ ನೀಡಿದರು.

ಬಾಲಕಿಯನ್ನು ಆಪ್ತ ಸಮಾಲೋಚನೆಗೊಳಪಡಿಸಲು ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!