Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಮತಾಂತರ, ಗೋವು ಕಳ್ಳತನ ಸಹಿಸಲಾಗದು

ಮತಾಂತರ, ಗೋವು ಕಳ್ಳತನ ಸಹಿಸಲಾಗದು

ಮತಾಂತರ, ಗೋವು ಕಳ್ಳತನ ಸಹಿಸಲಾಗದು

(ಸುದ್ದಿಕಿರಣ ವರದಿ)
ಉಡುಪಿ: ಮತಾಂತರ ಹಾಗೂ ಅಕ್ರಮ ಗೋವು ಕಳ್ಳತನ ಮತ್ತು ಗೋವು ಸಾಗಾಟವನ್ನು ಹಿಂದೂ ಸಮಾಜ ಸಹಿಸದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಎಚ್ಚರಿಸಿದ್ದಾರೆ.
ಕಾರ್ಕಳ ತಾಲೂಕಿನ ಕೆಲವೊಂದು ಕಡೆಗಳಲ್ಲಿ ಕ್ರಿಶ್ಚಿಯನ್ ಮಿಷನರಿಗಳಿಂದ ಅವ್ಯಾಹತವಾಗಿ ನಡೆಯುತ್ತಿರುವ ಮತಾಂತರ ಪ್ರಕ್ರಿಯೆ ಹಾಗೂ ಜಿಲ್ಲೆಯಾದ್ಯಂತ ನಡೆಯುತ್ತಿರುವ ಗೋವು ಕಳ್ಳತನ ಮತ್ತು ಆಕ್ರಮ ಗೋ ಸಾಗಾಟವನ್ನು ಸಹಿಸಲಾಗುವುದಿಲ್ಲ. ಜಿಲ್ಲಾಡಳಿತ ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿಶೇಷ ಮುತುವರ್ಜಿ ವಹಿಸಿ, ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಈ ಬಗ್ಗೆ ದೂರು ನೀಡಿದಾಗ ತಡ ಮಾಡದೇ ತಕ್ಷಣ ಕಾರ್ಯಾಚರಣೆ ಕೈಗೊಂಡಲ್ಲಿ ಮುಂದೆ ಆಗಬಹುದಾದ ಅನಾಹುತಗಳನ್ನು ತಪ್ಪಿಸಬಹುದು.
ಜಿಲ್ಲೆಯಲ್ಲಿ ಯಾವುದೇ ರೀತಿಯ ಅಕ್ರಮ ಮತಾಂತರ ಮತ್ತು ಗೋವು ಕಳ್ಳತನ, ಆಕ್ರಮ ಗೋವು ಸಾಗಾಟವನ್ನು ಬಿಜೆಪಿ ಅಥವಾ ಹಿಂದೂ ಸಂಘಟನೆಗಳು ಸಹಿಸುವುದಿಲ್ಲ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಗೋವು ಹಂತಕರು ಮತ್ತು ಮತಾಂತರವನ್ನೇ ಕಾಯಕವನ್ನಾಗಿಸಿಕೊಂಡಿರುವ ಸಮಾಜಘಾತುಕ ಶಕ್ತಿಗಳು ಎಚ್ಚರ ವಹಿಸುವುದು ಒಳಿತು ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!